Delhi : ಇತ್ತೀಚೆಗೆ ನೆಹರು ಸ್ಮಾರಕದ ಹೆಸರನ್ನು ಬದಲಿಸಿರುವ ಕೇಂದ್ರ ಸರ್ಕಾರ, "ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಸೊಸೈಟಿ" ಎಂದು ಮರುನಾಮಕರಣ ಮಾಡಲಾಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಸೊಸೈಟಿಯ ಉಪಾಧ್ಯಕ್ಷರಾಗಿ, ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ಚರ್ಚಿಸಿ ಮರುನಾಮಕರಣ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ-ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಹರಿದು ಹೆಡ್ ಕಾನಸ್ಟೇಬಲ್ ಸಾವು
ಜವಾಹರ್ ಲಾಲ್ ನೆಹರು ಅವರು ಪ್ರಧಾನಿ ಆಗಿದ್ದಾಗ 16 ವರ್ಷಗಳ ಕಾಲ ತೀನ್‌ಮೂರ್ತಿ ಮಾರ್ಗದಲ್ಲಿರುವ ಅದೇ ಕಟ್ಟಡದಲ್ಲಿ ವಾಸವಿದ್ದರು. ಅವರ ನಿಧನದ ನಂತರ ಈ ಕಟ್ಟಡವನ್ನು ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯವನ್ನಾಗಿ ಮಾಡಲಾಗಿತ್ತು.
जिनका कोई इतिहास ही नहीं है, वो दूसरों के इतिहास को मिटाने चले हैं !
Nehru Memorial Museum & Library का नाम बदलने के कुत्सित प्रयास से, आधुनिक भारत के शिल्पकार व लोकतंत्र के निर्भीक प्रहरी, पंडित जवाहरलाल नेहरू जी की शख़्सियत को कम नहीं किया जा सकता।
इससे केवल BJP-RSS की ओछी…
— Mallikarjun Kharge (@kharge) June 16, 2023
ಜವಾಹರ್‌ಲಾಲ್ ನೆಹರು ಸ್ಮಾರಕದ ಹೆಸರು ಬದಲಿಸುತ್ತಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಟ್ವೀಟ್ ಮಾಡಿದ್ದು, "ತಮ್ಮ ಸ್ವಂತ ಇತಿಹಾಸವೇ ಇಲ್ಲದವರು ಇನ್ನೊಬ್ಬರ ಹಿನ್ನಲೆಯನ್ನು ಹತ್ತಿಕ್ಕುವುದರಲ್ಲಿಯೇ ತೊಡಗಿಕೊಂಡಿರುತ್ತಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರ ಈ ರೀತಿಯ ನಡೆಯಿಂದ ಅವರ ಕೀಳುಮಟ್ಟದ ಮನಸ್ಥಿತಿ ಮತ್ತು ಸರ್ವಾಧಿಕಾರಿ ಧೋರಣೆಯ ಪರಿಚಯವಾಗುತ್ತಿದೆ" ಎಂದು ಕೇಂದ್ರದ ನಡುವಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
संकीर्णता और प्रतिशोध का दूसरा नाम मोदी है। 59 वर्षों से अधिक समय से नेहरू स्मारक संग्रहालय और पुस्तकालय एक वैश्विक बौद्धिक ऐतिहासिक स्थल और पुस्तकों एवं अभिलेखों का ख़ज़ाना घर रहा है। अब से इसे प्रधानमंत्री म्यूजियम और सोसायटी कहा जाएगा। पीएम मोदी भारतीय राष्ट्र-राज्य के…
— Jairam Ramesh (@Jairam_Ramesh) June 16, 2023
ಇದನ್ನೂ ಓದಿ-ಆನ್‌ಲೈನ್ ಅರ್ಜಿ ಸ್ವೀಕಾರಕ್ಕೆ ಸಜ್ಜಾಗಿಲ್ವಾ ಸರ್ಕಾರ? ಸೈಬರ್ ಖದೀಮರ ಪಾಲಿಗೆ ವರವಾಗುತ್ತಾ 'ಗ್ಯಾರಂಟಿ'?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.