ಕನ್ನಡದ ಖ್ಯಾತ ಗೀತ ಸಾಹಿತಿ, ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

HS Venkateshamurthy Death: 'ಇರಬೇಕು ಇರುವಂತೆ ತೊರೆದು ಸಾವಿರ ಚಿಂತೆ' ಭಾವಗೀತೆಯ ರಚನೆಕಾರ, ಕನ್ನಡದ ಖ್ಯಾತ ಸಾಹಿತಿ ಎಚ್.ಎಸ್.ವೆಂಕಟೇಶ್ ‌ಮೂರ್ತಿ  ಇಂದು ಇಹಲೋಕ ತ್ಯಜಿಸಿದ್ದಾರೆ. 

Written by - Yashaswini V | Last Updated : May 30, 2025, 09:13 AM IST
  • ಕಳೆದ ಹಲವು ದಿನಗಳಿಂದ ಬಳಲುತ್ತಿದ್ದ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ
  • ಕನ್ನಡದ ಖ್ಯಾತ ಕವಿ ಎಚ್‌ಎಸ್ ವೆಂಕಟೇಶಮೂರ್ತಿ ಎಚ್‌ಎಸ್‌ವಿ ಎಂತಲೇ ಖ್ಯಾತರಾಗಿದ್ದರು
  • ಎಚ್‌ಎಸ್‌ವಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಕನ್ನಡದ ಖ್ಯಾತ ಗೀತ ಸಾಹಿತಿ, ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

HS Venkateshamurthy Death: ಕನ್ನಡ ನಾಡಿನ ಖ್ಯಾತ ಗೀತರಚನೆಕಾರ, ಕಥೆ ಮತ್ತು ಸಂಭಾಷಣಕಾರ ಎಚ್.ಎಸ್. ವೆಂಕಟೇಶ್ ಮೂರ್ತಿ ನಿಧನನಾಗಿದ್ದಾರೆ. 80ರ ಹರೆಯದ ಎಚ್.ಎಸ್. ವೆಂಕಟೇಶಮೂರ್ತಿ (ಎಚ್ಎಸ್‌ವಿ) ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದ್ದು,  ತುಂಬಲಾರದ ನಷ್ಟವಾಗಿದೆ. 

Add Zee News as a Preferred Source

ವಯೋಸಹಜ ಕಾಯಿಲೆಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಚ್ ಎಸ್ ವೆಂಕಟೇಶ್ ‌ಮೂರ್ತಿ, ಚಿಕಿತ್ಸೆ ಫಲಕಾರಿಯಾಗದೆ ಕೆಂಗೇರಿ‌ ಬಿಜಿಎಸ್ ಆಸ್ಪತ್ರೆಯಲ್ಲಿ ‌ನಿಧನರಾಗಿದ್ದು, ಮೃತರು ನಾಲ್ವರು ಪುತ್ರರನ್ನು ಅಗಲಿದ್ದಾರೆ. 

1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ತಂದೆ ನಾರಾಯಣ ಭಟ್ಟರು ಮತ್ತು ತಾಯಿ ನಾಗರತ್ನಮ್ಮ ಅವರಿಗೆ ಜನಿಸಿದ ಎಚ್.ಎಸ್.ವೆಂಕಟೇಶ್ ‌ಮೂರ್ತಿ ಕನ್ನಡ ಸಾಹಿತ್ಯ ಜಗತ್ತಿನಲ್ಲಿ ಎಚ್‌ಎಸ್‌ವಿ ಎಂತಲೇ ಪ್ರಸಿದ್ದರಾಗಿದ್ದವರು. 

ವೃತ್ತಿ ಬದುಕು: 
ಭದ್ರಾವತಿಯಲ್ಲಿ ಡಿಪ್ಲೊಮೊ ಪಡೆದು ಮಲ್ಲಾಡಿ ಹಳ್ಳಿಯ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಎಚ್‌ಎಸ್ ವೆಂಕಟೇಶಮೂರ್ತಿ ಅವರು, 1966ರಿಂದ 1971ರ ವರೆಗೆ ಅದೇ ಶಾಲೆಯಲ್ಲಿ ಅದ್ಯಾಪಕರಾಗಿ  ಕರ್ತವ್ಯ ನಿರ್ವಹಿಸಿದರು. 1971 ರಿಂದ 1973ರವರೆಗೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಕನ್ನಡ ಎಂ.ಎ. ಅಧ್ಯಯನ ಮಾಡಿದ ಎಚ್‌ಎಸ್‌ವಿ 1973ರಿಂದ 2000ದವರೆಗೆ ಸುಮಾರು ಮೂರು ದಶಕಗಳ ಕಾಲ ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿಯೇ ವಾಸವಾಗಿದ್ದರು. 

ಗ್ರಾಮೀಣ ಪರಿಸರದಲ್ಲೇ ತಮ್ಮ ಬಾಲ್ಯವನ್ನು ಕಳೆದ ಎಚ್.ಎಸ್.ವೆಂಕಟೇಶ್ ‌ಮೂರ್ತಿ ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದ ಇವರು 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು.  

ಕಾವ್ಯಕೃತಿ, ನಾಟಕಗಳು: 
'ಕ್ರಿಯಾಪರ್ವ', 'ಎಷ್ಟೊಂದು ಮುಗಿಲು', 'ನದೀತೀರದಲ್ಲಿ', 'ಉತ್ತರಾಯಣ' ಮೊದಲಾದವು ಇವರ ಮುಖ್ಯ ಕಾವ್ಯಕೃತಿಗಳು; ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ, ಕಂಸಾಯಣ ಮೊದಲಾದುವು ಇವರ ಮುಖ್ಯ ನಾಟಕಗಳು, ‘ಈ ಮುಖೇನ‘ ಇವರ ವೈಚಾರಿಕ ಪ್ರಬಂಧಗಳ ಸಂಪುಟವಾಗಿದೆ. ಹಕ್ಕಿಸಾಲು, ಅಳಿಲು ರಾಮಾಯಣ, ಅಜ್ಜೀ ಕಥೆ ಹೇಳು, ಚಿನ್ನಾರಿ ಮುತ್ತ ಎಚ್‌ಎಸ್‌ವಿ ಅವರ ಮಕ್ಕಳ ಕೃತಿಗಳಾಗಿವೆ. 

ಚಿತ್ರರಂಗಕ್ಕೆ ಎಚ್‌ಎಸ್‌ವಿ ಕೊಡುಗೆ: 
ಎಚ್‌ಎಸ್ ವೆಂಕಟೇಶ ಮೂರ್ತಿ ಚಿತ್ರರಂಗಕ್ಕೂ ಅಪಾರ ಕೊಡುಗೆ ನೀಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ 'ಚಿನ್ನಾರಿ ಮುತ್ತ' ಇವರದ್ದೇ ಕಥೆ. ಕಥೆ ಮಾತ್ರವಲ್ಲದೆ, ಗೀತೆ, ಸಂಭಾಷಣೆಯಲ್ಲೂ ಖ್ಯಾತರಾಗಿದ್ದ ಇವರ ಪ್ರಮುಖ ರಚನೆಗಳೆಂದರೆ ‘ಅಮೆರಿಕ ಅಮೆರಿಕ’ ಚಿತ್ರದ ‘ಬಾನಲ್ಲಿ ಓಡೋ ಮೋಡ..’ ಕೊಟ್ರೇಶಿಯ ಕನಸು, ಕ್ರೌರ್ಯ, ಕೊಟ್ಟ, ಮತದಾನ, ಕಿರಿಕ್ ಪಾರ್ಟಿ ಚಿತ್ರಗಳಿಗೆ ಗೀತ ರಚನೆಯನ್ನೂ ಮಾಡಿದ್ದಾರೆ. 

ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ. 

ಎಚ್‌ಎಸ್‌ವಿಗೆ ಗೌರವ ಪುರಸ್ಕಾರಗಳು: 
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ – ಇವು ಸಾಹಿತಿ ಎಚ್.ಎಸ್.ವೆಂಕಟೇಶ್ ‌ಮೂರ್ತಿ ಅವರ ಸಾಹಿತ್ಯ ಕೊಡುಗೆಗಳಿಗೆ ಸಂದ ಕೆಲವು ಮುಖ್ಯ ಗೌರವ ಪುರಸ್ಕಾರಗಳಾಗಿವೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News