ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲು ಹೀನಾಯ ಸೋಲು ಅನುಭವಿಸಿದ ಬಳಿಕ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದೆ. ನಾಯಕರ ವಿರುದ್ಧ ಹೇಳಿಕೆ ನೀಡಿದಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವರಿಗೆ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Horoscope: ಇಂದು ಈ ರಾಶಿಯವರ ವೃತ್ತಿಜೀವನದಲ್ಲಿ ಯಶಸ್ಸನ್ನೇ ಕರುಣಿಸುವ ಶನಿಮಹಾತ್ಮ!


ಇದರ ಬೆನ್ನಲ್ಲೇ ಇಂದು (ಶನಿವಾರ) ಎಂ.ಪಿ ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಬುಲಾವ್ ಹಿನ್ನೆಲೆ ಬೆಂಗಳೂರಿನ ಅವರ ಡಾಲರ್ಸ್​​ ಕಾಲೋನಿಯಲ್ಲಿರುವ ನಿವಾಸದಲ್ಲಿ  ಭೇಟಿ ನೀಡಿದ್ದಾರೆ.


ನಿನ್ನೆ ಬಿಜೆಪಿ ನಾಯಕರ ಸಭೆಯಲ್ಲಿ ಪಕ್ಷಕ್ಕೆ ಮುಜುಗರ ತರುವಂತೆ ಹೇಳಿಕೆ ನೀಡುವವರನ್ನು ಕರೆದು ಮಾತನಾಡುವ ಜವಾಬ್ದಾರಿಯನ್ನು ಬಿ.ಎಸ್‌.ಯಡಿಯೂರಪ್ಪ ಅವರಿಗೆ ನೀಡಲಾಗಿತ್ತು.


ಇದನ್ನೂ ಓದಿ:  ಸಚಿವ ಎಂ ಬಿ ಪಾಟೀಲ ಜತೆ ತೈವಾನ್‌ ಹೂಡಿಕೆದಾರರ ಭೇಟಿ


ಹೀಗಾಗಿ ಎಂ.ಪಿ. ರೇಣುಕಾಚಾರ್ಯ ಜೊತೆ ಇಂದು ಬಿಎ ಸ್ ವೈ ಮಾತನಾಡಿದ್ದಾರೆ. ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.