"ಕೃಷಿ ಕಾಯ್ದೆಗಳ ವಾಪಸ್ ಪಡೆಯುವ ಹೇಳಿಕೆ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ"

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ ಎಂದು ಜೆಡಿಎಸ್ ನಾಯಕ ಎಚ್ ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Written by - Zee Kannada News Desk | Last Updated : Nov 19, 2021, 05:43 PM IST
  • ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ ಎಂದು ಜೆಡಿಎಸ್ ನಾಯಕ ಎಚ್ ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 "ಕೃಷಿ ಕಾಯ್ದೆಗಳ ವಾಪಸ್ ಪಡೆಯುವ ಹೇಳಿಕೆ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ" title=
file photo

ಬೆಂಗಳೂರು: ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ ಎಂದು ಜೆಡಿಎಸ್ ನಾಯಕ ಎಚ್ ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಹೇಳಿದ ಬೆನ್ನಲ್ಲೇ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಬಂದಿದೆ."ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು  ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: "ಬಿಜೆಪಿ ನಾಯಕರು ಯಾಕೆ ಹಾವು ಕಂಡ ಹಾಗೆ ಬೆಚ್ಚಿ ಬೀಳುತ್ತಿದ್ದಾರೆ?"

'ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು" ಎಂದು ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಬಣ ರಾಜಕಾರಣದ ಮತ್ತೊಂದು ಮುಖ ಅನಾವರಣವಾಗಿದೆ: ಬಿಜೆಪಿ

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ" ಎಂದು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News