ಗಣರಾಜ್ಯೋತ್ಸವ: ಜನವರಿ ಮಾಹೆಯಲ್ಲಿ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ 2021ರ ಜನವರಿ ಮಾಹೆಯಲ್ಲಿ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇಕಡಾ 50 % ರ ರಿಯಾಯಿತಿಯಲ್ಲಿ ಖರೀದಿಸಬಹುದು.

Last Updated : Jan 2, 2021, 11:35 PM IST
  • ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ,ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ
  • ಕನ್ನಡ ಪ್ರಾಧಿಕಾರದ www.kannadapustakapradhikara.com ವೈಬ್‌ಸೈಟ್‌ನಲ್ಲಿ ಪುಸ್ತಕ ವಿಭಾಗಗಳು ಆಯ್ಕೆಮಾಡಿ ಆನ್‌ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.
ಗಣರಾಜ್ಯೋತ್ಸವ: ಜನವರಿ ಮಾಹೆಯಲ್ಲಿ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕ title=
Photo Courtesy: Facebook

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ 2021ರ ಜನವರಿ ಮಾಹೆಯಲ್ಲಿ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇಕಡಾ 50 % ರ ರಿಯಾಯಿತಿಯಲ್ಲಿ ಖರೀದಿಸಬಹುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.ಅಲ್ಲದೇ ಕನ್ನಡ ಪುಸ್ತಕ ಪ್ರಾಧಿಕಾರ (Kannada Pustaka Pradhikaraದ ಆನ್‌ಲೈನ್‌ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ. ಕನ್ನಡ ಪ್ರಾಧಿಕಾರದ www.kannadapustakapradhikara.com ವೈಬ್‌ಸೈಟ್‌ನಲ್ಲಿ ಪುಸ್ತಕ ವಿಭಾಗಗಳು ಆಯ್ಕೆಮಾಡಿ ಆನ್‌ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.

ಇದನ್ನೂ ಓದಿ: ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ...!

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ,ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿಗೆ ಸೇರಿದಂತೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 446 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು ಎಂದು ಆಡಳಿತಾಧಿಕಾರಿ ಕೆ.ಬಿ ಕಿರಣ್‌ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
 

Trending News