ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Siddaramiah Biopic: ತೆರೆ ಮೇಲೆ ಸಿದ್ದರಾಮಯ್ಯ ಬಯೋಪಿಕ್: ಸಿದ್ದು ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ತಮಿಳಿನ ಈ ನಟ!


ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿಯ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರನ್ನು ಕೋರಿದರು.


ಇದನ್ನೂ ಓದಿ: ಕರುನಾಡಿನ ಕಿಚ್ಚ ಈಗ ಸಮಂತಾ ಜೊತೆ ಡ್ಯೂಯಟ್ ಹಾಡಲು ಫುಲ್ ರೆಡಿ!


ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜಲಸಂಪನ್ಮೂಲ ಮತ್ತು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್  ಉಪಸ್ಥಿತರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.