ಗೊಂಡ ಕುರುಬ ಮತ್ತು ಗಂಗಾಮತ ಸಮುದಾಯವನ್ನು ಎಸ್ಟಿಗೆ ಸೇರಿಸಲು ಮನವಿ
ಗೊಂಡ ಕುರುಬ ಮತ್ತು ಗಂಗಾಮತ ಸಮುದಾಯವನ್ನು ಎಸ್ಟಿ ಸಮುದಾಯಕ್ಕೆ ಸೇರಿಸಬೇಕೆಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನವದೆಹಲಿ: ಗೊಂಡ ಕುರುಬ ಮತ್ತು ಗಂಗಾಮತ ಸಮುದಾಯವನ್ನು ಎಸ್ಟಿ ಸಮುದಾಯಕ್ಕೆ ಸೇರಿಸಬೇಕೆಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತಾಗಿ ಪ್ರಿಯಾಂಕ್ ಖರ್ಗೆ ಅವರು ತಮ್ಮ ಅಧಿಕೃತ ಸಾಮಾಜಿಕ ವೇದಿಕೆಯಲ್ಲಿ ಬರೆದುಕೊಂಡಿದ್ದಿಷ್ಟು...
ಇಂದು ದೆಹಲಿಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಾದ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿ ಗಂಗಾಮತ (ಕಬ್ಬಲಿಗ) ಮತ್ತು ಗೊಂಡ ಕುರುಬರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಬಗ್ಗೆ 2019-20ರಲ್ಲಿ ಕಾಂಗ್ರೆಸ್ ಸರ್ಕಾರ ಕಳುಹಿಸಿದ್ದ ಶಿಫಾರಸ್ಸನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದೆ.
ಇದನ್ನೂ ಓದಿ : Vastu Tips : ಮನೆಯಲ್ಲಿ ಜೇಡ ಬಲೆ ಕಟ್ಟಿದೆಯಾ? ಹಾಗಿದ್ರೆ, ಎಚ್ಚರ..!
"ಗಂಗಾಮತ" ಸಮುದಾಯ ಮತ್ತು ಬೀದರ್, ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲೆಗಳ ಗೊಂಡ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಅದರ ವರದಿ ಸಮೇತ STಗೆ ಸೇರಿಸುವಂತೆ ಶಿಘಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿತ್ತು.
ಇದನ್ನೂ ಓದಿ : Horoscope Today: ನಿಮ್ಮ ರಾಶಿಗಳ ಯಶಸ್ಸಿನ ಪ್ರಮಾಣ ಗೊತ್ತೇ?
ಈ ಎರಡೂ ಸಮುದಾಯಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದು,ಸಮಾಜದಲ್ಲಿ ಮೇಲ್ದರ್ಜೆಗೇರುವ ಅವಕಾಶಗಳಿಗಾಗಿ ಹೋರಾಟ ನಡೆಸುತ್ತಾ ಬಂದಿವೆ ಎಂದು ಸಚಿವರಿಗೆ ಮನದಟ್ಟು ಮಾಡಿದೆ.ಇದರ ಕುರಿತು ಆದಷ್ಟು ಶೀಘ್ರದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವರು ಇಂದು ಭರವಸೆ ನೀಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.