ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಂಸ್ಕರಿಸಿದ ನೀರು ಒದಗಿಸಲು ಮನವಿ

Chinnaswamy Stadium Bengaluru: ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್ಗಳಷ್ಟು ನೀರಿನ ಅವಶ್ಯಕತೆ ಇದೆ. ಇದಕ್ಕಾಗಿ ಕಬ್ಬನ್ ಪಾರ್ಕ್ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಅಗತ್ಯ ನೀರನ್ನು ದೊರಕಿಸಿ ಕೊಡುವಂತೆ KSCA ಪದಾಧಿಕಾರಿಗಳು ಮನವಿ ಮಾಡಿದರು.

Written by - Bhavya Sunil Bangera | Edited by - Manjunath N | Last Updated : Mar 20, 2024, 09:15 PM IST
  • ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್ಗಳಷ್ಟು ನೀರಿನ ಅವಶ್ಯಕತೆ ಇದೆ.
  • ಇದಕ್ಕಾಗಿ ಕಬ್ಬನ್ ಪಾರ್ಕ್ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಅಗತ್ಯ ನೀರನ್ನು ದೊರಕಿಸಿ ಕೊಡುವಂತೆ KSCA ಪದಾಧಿಕಾರಿಗಳು ಮನವಿ ಮಾಡಿದರು.
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಂಸ್ಕರಿಸಿದ ನೀರು ಒದಗಿಸಲು ಮನವಿ title=

Chinnaswamy Stadium Bengaluru: ಬೆಂಗಳೂರು: ಮುಂಬರುವ ಐಪಿಎಲ್(IPL) ಕ್ರಿಕೆಟ್ ಪಂದ್ಯಾವಳಿಗಳಿಗೆ ಅನುಕೂಲವಾಗುವಂತೆ ಸಂಸ್ಕರಿಸಿದ ನೀರನ್ನು  ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಒದಗಿಸಲು ಕೋರಿ KSCA ಆಡಳಿತ ಮಂಡಳಿಯ ಪದಾಧಿಕಾರಿಗಳು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಮಾಡಿದರು. 

ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್ಗಳಷ್ಟು ನೀರಿನ ಅವಶ್ಯಕತೆ ಇದೆ. ಇದಕ್ಕಾಗಿ ಕಬ್ಬನ್ ಪಾರ್ಕ್ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಅಗತ್ಯ ನೀರನ್ನು ದೊರಕಿಸಿ ಕೊಡುವಂತೆ KSCA ಪದಾಧಿಕಾರಿಗಳು ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ಅವರು ಸಂಸ್ಕರಿಸಿದ ನೀರನ್ನು ಬಳಸಲು ಉತ್ತೇಜನ ನೀಡುವ ದೃಷ್ಟಿಯಿಂದ ಹಾಗು ಇದರಿಂದ ಕಾವೇರಿ  ಅಥವಾ ಕೊಳವೆ ಬಾವಿಯ ನೀರು ದುರ್ಬಳಕೆ ಆಗದೆ ಇರುವುದರಿಂದ ಸದರಿ ಚಟುವಟಿಕೆಯನ್ನು ಅನುವು ಮಾಡವುದು ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News