ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ, ರಕ್ಷಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

​​CM Siddaramaiah: ಆರೋಗ್ಯಕ್ಕೂ ನೈರ್ಮಲ್ಯಕ್ಕೂ ನೇರ ಸಂಬಂಧವಿದೆ. ಸ್ವಚ್ಛತೆ ಇದ್ದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ. ಇತ್ತೀಚೆಗೆ ಕಲುಷಿತ ನೀರಿನಿಂದಾಗಿರುವ ಅನಾಹುತಗಳನ್ನು ನಾವು ನೋಡಿದ್ದೇವೆ. ಅನೇಕರು ಸಾವೀಗೀಡಾಗಿದ್ದು, ಕಾಯಿಲೆಗಳಿಗೂ ಒಳಗಾಗಿದ್ದಾರೆ. 

Written by - Yashaswini V | Last Updated : Jul 3, 2024, 02:32 PM IST
  • ಪ್ರತಿದಿನವೂ ಪರಿಸರ ದಿನವನ್ನಾಗಿ ಆಚರಿಸುವ ಪ್ರವೃತ್ತಿ ಅಗತ್ಯ.
  • ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು.
  • ಇದರಿಂದ ನಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಅನುಕೂಲ. ಎಲ್ಲರೂ ಪರಿಸರ ಪ್ರೇಮಿಗಳಾಗಿ ನೈರ್ಮಲ್ಯ ಕಾಪಾಡಿಕೊಳ್ಳೋಣ
ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ, ರಕ್ಷಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ title=

World Environment Day: ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ ರಕ್ಷಿಸಬೇಕು. ಇದೊಂದು ಕಷ್ಟದ  ಕೆಲಸವೇನಲ್ಲ ಆದರೆ ಎಲ್ಲರೂ ಮನಸ್ಸು ಮಾಡಬೇಕು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಶ್ವ ಪರಿಸರ ದಿನಾಚರಣೆ (World Environment Day) ಅಂಗವಾಗಿ ಇಂದು  ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಸೀಮೆ ಸಿದ್ದರಾಮಯ್ಯ ರಾಜ್ಯ ಪರಿಸರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಪ್ರತಿದಿನವೂ ಪರಿಸರ ದಿನವನ್ನಾಗಿ  ಆಚರಿಸುವ ಪ್ರವೃತ್ತಿ ಅಗತ್ಯ. ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಅನುಕೂಲ. ಎಲ್ಲರೂ ಪರಿಸರ ಪ್ರೇಮಿಗಳಾಗಿ ನೈರ್ಮಲ್ಯ ಕಾಪಾಡಿಕೊಳ್ಳೋಣ ಎಂದರು.

ಇದನ್ನೂ ಓದಿ- Happiness Index : ವಿಶ್ವದ ಅತ್ಯಂತ ಸಂತೋಷಭರಿತ ದೇಶ ಫಿನ್ಲೆಂಡ್, ಭಾರತಕ್ಕೆ 126ನೇ ಸ್ಥಾನ

ಪರಿಸರ ಸಂರಕ್ಷಣೆ ಎಲ್ಲರ ಹೊಣೆ: 
ಪ್ರತಿಯೊಬ್ಬರೂ ಪಾಲ್ಗೊಂಡರೆ  ಮಾತ್ರ  ಪರಿಸರವನ್ನು ಸಂರಕ್ಷಣೆ ಮಾಡಲು ಸಾಧ್ಯ. ಸರ್ಕಾರ ಮತ್ತು ಸಾರ್ವಜನಿಕರು ಒಟ್ಟಾಗಿ ಈ ನಿಟ್ಟಿನಲ್ಲಿ ಕೈಜೋಡಿಸಬೇಕು. ವಿದ್ಯಾರ್ಥಿ ದೆಸೆಯಿಂದಲೇ ಪರಿಸರ ಸಂರಕ್ಷಣೆಯ ಲಾಭಗಳೇನು ಎಂದು ತಿಳಿಸಿ ವಿದ್ಯಾರ್ಥಿಗಳು ಪರಿಸರ, ಕಾಡು, ಜನಜೀವನ, ಪ್ರಾಣಿ ಸಂಕುಲಗಳ ಬಗ್ಗೆ ಅರಿತುಕೊಳ್ಳಬೇಕು. ಮನುಷ್ಯರು ಬದುಕುವಂತೆ ಪ್ರಾಣಿ ಸಂಕುಲಕ್ಕೂ ಬದುಕುವ ಹಕ್ಕಿದೆ. ಅದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ
ಆರೋಗ್ಯಕ್ಕೂ ನೈರ್ಮಲ್ಯಕ್ಕೂ ನೇರ ಸಂಬಂಧವಿದೆ. ಸ್ವಚ್ಛತೆ ಇದ್ದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ. ಇತ್ತೀಚೆಗೆ ಕಲುಷಿತ ನೀರಿನಿಂದಾಗಿರುವ ಅನಾಹುತಗಳನ್ನು ನಾವು ನೋಡಿದ್ದೇವೆ. ಅನೇಕರು ಸಾವೀಗೀಡಾಗಿದ್ದು, ಕಾಯಿಲೆಗಳಿಗೂ ಒಳಗಾಗಿದ್ದಾರೆ. ಶುದ್ಧ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದೆಂದು ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಶುದ್ಧ ಕುಡಿಯುವ ನೀರಿನ ಸರಬರಾಜಿನ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರೂ ಕೈಜೋಡಿಸಬೇಕು
ಇತ್ತೀಚೆಗೆ ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ನಗರಪಾಲಿಕೆ, ಆರೋಗ್ಯ ಇಲಾಖೆ, ಪೌರಾಡಳಿತ ಇಲಾಖೆಗಳ ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರೂ ಕೈಜೋಡಿಸಿದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ ಎಂದರು.

ಇದನ್ನೂ ಓದಿ- ಸಿಎಂ ಸಿದ್ದರಾಮಯ್ಯ ಸಿಗರೇಟ್ ಬಿಟ್ಟಿದ್ದು ಯಾವಾಗಾ ಗೊತ್ತಾ? ಈ ಬಗ್ಗೆ ಅವರು ಹೇಳಿದ್ದೇನು?

ಸಂಶೋಧನೆಗಳು ಸರಿಯಾದ ದಿಕ್ಕಿನಲ್ಲಿ ನಡೆಯಬೇಕು: 
ನಿಸರ್ಗವನ್ನು ಪ್ರೀತಿಸುವ ಮನಸನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ನಿಸರ್ಗ ಕಾಪಾಡುವುದು ಕಷ್ಟವೇನಿಲ್ಲ. ಅದನ್ನು ಪ್ರೀತಿಸುವ ಪ್ರವೃತ್ತಿ ಅಗತ್ಯ. ಒಂದು ಮರ ಕಡಿದರೆ ಮತ್ತೊಂದು ನೆಡಬೇಕು. ಕಾಡು ಬೆಳೆಸಬೇಕು.  ಕಳೆದ 20 ವರ್ಷಗಳಲ್ಲಿ ಪ್ರವಾಹ ಹಾಗೂ ಬರಗಾಲವನ್ನು ನಾವು ಎದುರಿಸುತ್ತಿದ್ದು ಇದರ ಕಾರಣಗಳ ಬಗ್ಗೆ ಸಂಶೋಧನೆಗಳು ಅಗತ್ಯವೆಂದರು.
ಸಂಶೋಧನೆಗಳು ಸರಿಯಾದ ದಾರಿಯಲ್ಲಿ  ನಡೆಯಬೇಕು ಹಾಗೂ ಸಂಶೋಧನಾ ಕೇಂದ್ರಗಳೂ ಹೆಚ್ಚಾಗಬೇಕು. ಯಾವ ಭಾಗದಲ್ಲಿ ಯಾವ ರೀತಿ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಬೇಕೆನ್ನುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಗಮನ ಹರಿಸಬೇಕು ಎಂದು ಸಿಎಂ ಸೂಚಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News