ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿಗದಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Outsourcing Recruitment Reservation: ರಾಜ್ಯ  ಸರ್ಕಾರಿ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ʼಡಿʼ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  

Written by - Puttaraj K Alur | Last Updated : May 28, 2024, 10:07 PM IST
  • ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರದಿಂದ ಆದೇಶ
  • ಈ ಬಗ್ಗೆ ಅಧಿಕೃತವಾಗಿ ಗೆಜೆಟ್ ಅಧಿಸೂಚನೆಯಲ್ಲಿ ಆದೇಶವನ್ನು ಪ್ರಕಟಿಸಲಾಗಿದೆ
  • ಸರ್ಕಾರದ ಇಲಾಖೆಗಳು/ಸ್ವಾಯತ್ತ ಸಂಸ್ಥೆ/ನಿಗಮಗ/ಮಂಡಳಿ/ವಿಶ್ವವಿದ್ಯಾನಿಲಯಗಳಿಗೂ ಅನ್ವಯ
ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿಗದಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ title=
ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ನಿಗದಿಪಡಿಸಿ ರಾಜ್ಯ ಸರ್ಕಾರವು ಅಧಿಕೃತವಾಗಿ ಗೆಜೆಟ್ ಅಧಿಸೂಚನೆಯಲ್ಲಿ ಆದೇಶವನ್ನು ಪ್ರಕಟಿಸಿದೆ. ಈ ಸಂಬಂಧ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ ಗೆಜೆಟ್ ಅಧಿಸೂಚನೆಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರಿ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ʼಡಿʼ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. 

ಇದನ್ನೂ ಓದಿ: ವಿಜಯೇಂದ್ರ ಫ್ರೀ ಇದ್ದರೆ ಬಂದು ನನ್ನ ಹೇರ್‌ ಕಟ್‌ ಮಾಡಲಿ: ಮಧು ಬಂಗಾರಪ್ಪ

2023ರ ಡಿಸೆಂಬರ್‌ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿ ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕೆಲವು ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಮೀಸಲಾತಿ ನಿಯಮಗಳ ಪ್ರಮುಖ ಅಂಶಗಳು

1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
2. ಪ್ರತಿವರ್ಷ ಹೊರ ಸಂಪನ್ಮೂಲ ಏಜೆನ್ಸಿಗಳಿಂದ KTPP ಅಧಿನಿಯಮ 1999ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿ ಪಡೆಯಲು ಷರತ್ತುಗಳನ್ನು ನಮೂದಿಸುವುದು.
3. ಹೊರಗುತ್ತಿಗೆ ನೇಮಕಾತಿಯಲ್ಲಿ SC/ST, ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇ.33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಬೇಕು.
4. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸಬೇಕು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶ(ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)ನೀಡಲು ಕ್ರಮವಹಿಸಸಬೇಕು. 
5. ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ಅಥವಾ ಅರ್ಧದಲ್ಲೇ ಬಿಟ್ಟಲ್ಲಿ ಅಂತಹ ಖಾಲಿ ಉಳಿಯುವ ಸ್ನಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳಬೇಕು.
6. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿ ಜಾರಿಗೊಳಿಸಬೇಕು.
7. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರಬೇಕು.
8. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶ ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕೂ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸುವಂತಿಲ್ಲ.

ಇದನ್ನೂ ಓದಿ: ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ ಸಂಬಂಧ ಇಬ್ಬರ ಬಂಧನ!

ಈ ಮೇಲಿನ ಸೂಚನೆಗಳು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು/ಸ್ವಾಯತ್ತ ಸಂಸ್ಥೆಗಳು/ನಿಗಮಗಳು/ಮಂಡಳಿಗಳು/ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News