"ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳಿಗೆ ಮೀಸಲು"

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Written by - Manjunath N | Last Updated : Aug 5, 2024, 03:27 AM IST
  • ನೇಮಕಾತಿಗಾಗಿ ಕ್ರೀಡಾ ಸಾಧಕರಿಂದ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿತ್ತು.
  • ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಸಮಿತಿಯು ಆಯ್ಕೆ ಮಾಡಿದೆ.
  • ಕ್ರೀಡೆಗಳಲ್ಲಿ ಸಾಧನೆ ಮಾಡುವ ಮೂಲಕ ನೀವೆಲ್ಲರೂ ದೇಶಕ್ಕೆ ಕೀರ್ತಿ ತಂದಿದ್ದೀರಿ.
"ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳಿಗೆ ಮೀಸಲು" title=

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಒಲಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12 ಮಂದಿ  ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದರು.
ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಹೇಳಿದರು.

ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್‌, ಏಶ್ಯಾಡ್‌ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು ನೆನೆಗುದಿಗೆ ಬಿದ್ದಿತ್ತು. ಇದೀಗ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಇದನ್ನೂ ಓದಿ: "ಅವನೆಂದರೆ ನನಗಿಷ್ಟ": ಡಿವೋರ್ಸ್ ಬೆನ್ನಲ್ಲೇ ಅಣ್ಣನ ಗೆಳೆಯನ ಮೇಲೆಯೇ ಖ್ಯಾತ ನಟಿಗೆ ಪ್ರೀತಿ! ಸೆನ್ಸೇಷನಲ್‌ ಹೇಳಿಕೆ ವೈರಲ್

ಈ ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಮಾತ್ರ ಕ್ರೀಡಾ ಸಾಧಕರಿಗೆ ಉದ್ಯೋಗದಲ್ಲಿ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿತ್ತು. ಇದೀಗ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.3ರಷ್ಟು ಹುದ್ದೆಗಳನ್ನು ಹಾಗೂ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು.  

ಯುವ ಸಬಲೀಕರಣ ಇಲಾಖೆಯಲ್ಲಿ ಸಾಧಕ ಕ್ರೀಡಾಪಟುಗಳು ಹಾಗೂ ಅವರನ್ನು ರೂಪಿಸಿದ ತರಬೇತುದಾರರು ಮತ್ತು ದೈಹಿಕ ಶಿಕ್ಷಣ ಪರಿಣಿತರಿಗೂ ನೇಮಕಾತಿಗೆ ಅವಕಾಶ ಕಲ್ಪಿಸಿ ಭರ್ತಿ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಲಾಗಿದೆ.

ನೇಮಕಾತಿಗಾಗಿ ಕ್ರೀಡಾ ಸಾಧಕರಿಂದ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಸಮಿತಿಯು ಆಯ್ಕೆ ಮಾಡಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡುವ ಮೂಲಕ ನೀವೆಲ್ಲರೂ ದೇಶಕ್ಕೆ ಕೀರ್ತಿ ತಂದಿದ್ದೀರಿ. ನಿಮ್ಮ ಸಾಧನೆ ಗುರುತಿಸಿ, ಪ್ರೋತ್ಸಾಹ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ..ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದು. ಒಲಂಪಿಕ್ಸ್‌ ನಂತಹ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಪರ್ಧಿಸಬೇಕೆಂಬುವುದು ನಮ್ಮ ಉದ್ದೇಶ. ಇದಕ್ಕೆ ಪೂರಕವಾದ ವಾತಾವರಣವನ್ನು, ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಅವರು ಭರವಸೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News