`ನಮೋ` ಭೇಟಿ ಹಿನ್ನೆಲೆಯಲ್ಲಿ ಅ.28, 29 ರಂದು ಧರ್ಮಸ್ಥಳದಲ್ಲಿ ಸಾರ್ವಜನಿಕರಿಗೆ ದರ್ಶನ ನಿರ್ಬಂಧ
ದಕ್ಷಿಣ ಕನ್ನಡ: ಅಕ್ಟೋಬರ್ 29 ರಂದು ಪ್ರಧಾನಿ ನರೇಂದ್ರ ಮೋದಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅ. 28ರ ಮಧ್ಯಾಹ್ನ 2 ಗಂಟೆಯಿಂದ 29ರ ಮಧ್ಯಾಹ್ನ 2 ಗಂಟೆಯ ವರೆಗೆ ಸಾರ್ವಜನಿಕರಿಗೆ ಮಂಜುನಾಥ ಸ್ವಾಮಿಯ ದರ್ಶನವನ್ನು ನಿರ್ಬಂಧಿಸಲಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
'ನಮೋ' ಭೇಟಿ ಹಿನ್ನೆಲೆಯಲ್ಲಿ ಧರ್ಮಸ್ಥಳ ಹಾಗೂ ಉಜಿರೆ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಶನಿವಾರ ಮಧ್ಯಾಹ್ನ ದಿನದ ಭಾನುವಾರ ಮಧ್ಯಾಹ್ನದ ವರೆಗೂ ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಸಂಬಂಧಿತರಿಗೆ ಸೂಚಿಸಲಾಗಿದೆ.