ಬೆಂಗಳೂರು: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಸಿಎಂ ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿತು. ಈ ವೇಳ ಮಾತನಾಡಿದ ಸಿದ್ದರಾಮಯ್ಯ, ‘ಸರ್ಕಾರ ಘೋಷಿಸಿದ್ದಂತೆ 5 ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು’ ಎಂದು ತಿಳಿಸಿದರು.
ಇದನ್ನೂ ಓದಿ: ಆರೆಸೆಸ್ಸ್ ಕಾರ್ಯಕ್ರಮದಲ್ಲಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೆಸರು..! ಸ್ಪಷ್ಟನೆ ನೀಡಿದ ನಿರ್ದೇಶಕರು
ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿ ನಿಯೋಗವು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಹಲವು ಸಮಸ್ಯೆಗಳ ಕುರಿತು ಚರ್ಚಿಸಿ, ತಮ್ಮ ಬೇಡಿಕೆಗಳ ಮನವಿಪತ್ರವನ್ನು ನೀಡಿದರು. pic.twitter.com/QlH2wmhZX6
— CM of Karnataka (@CMofKarnataka) June 30, 2023
ಚಾವಡಿಯು ಕಳೆದೊಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದರ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ’ ಎಂದು ಸಭೆಗೆ ತಿಳಿಸಲಾಯಿತು.
ಕಳೆದ 5 ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿಶಾಲೆ ಮತ್ತು ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಸಲ್ಲಿಸಲಾಯಿತು.
ಇದನ್ನೂ ಓದಿ: ಸಿದ್ದರಾಮಯ್ಯ ಘೋಷಿಸಿದಂತೆ ರಾಜ್ಯದ ಜನತೆಗೆ ಒಟ್ಟು 15 ಕೆಜಿ ಅಕ್ಕಿ ದೊರೆಯಬೇಕು: ಬಿಜೆಪಿ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಖ್, ರಹಮತ್ ತರೀಕೆರೆ ಮೊದಲಾದವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.