4 ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ : ಸಚಿವ ದಿನೇಶ್ ಗುಂಡೂರಾವ್
Minister Dinesh Gundurao : 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಉಚಿತವಾಗಿ ನೀಡುವ ಮಹತ್ವದ ಯೋಜನೆಗೆ ಬೆಂಗಳೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
Resumption of Shuchi project : ಜ್ಞಾನಜ್ಯೋತಿ ಸಭಾಂಗಣದಲ್ಲಿ ಹೆಣ್ಣುಮಕ್ಕಳು ಆರೋಗ್ಯ ಸಚಿವರೊಂದಿಗೆ ಜ್ಯೋತಿ ಬೆಳಗಿಸಿ, ಯೋಜನೆಗೆ ಮರುಚಾಲನೆ ನೀಡಿದ ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿಯ ಸುಮಾರು 19 ಲಕ್ಷ ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಗಳ ವಿತರಣೆ ಇಂದಿನಿಂದ ಆರಂಭಿಸಲಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಚಾಲನೆ ನೀಡಿ, ಆರೋಗ್ಯ ಇಲಾಖೆ ನೇರವಾಗಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳನ್ನ ತಲುಪಿಸಲಿದ್ದು, ಶಾಲೆಯ ಮುಖ್ಯಸ್ಥರು ಹೆಣ್ಣುಮಕ್ಕಳಿಗೆ ಕಿಟ್ ಗಳನ್ನ ವಿತರಣೆ ಮಾಡಲಿದ್ದಾರೆ. ಒಂದು ಪ್ಯಾಕ್ ನಲ್ಲಿ 10 ಸ್ಯಾನಿಟರಿ ನ್ಯಾಪ್‌ಕಿನ್ ಗಳಿದ್ದು, ಒಂದು ವರ್ಷಕ್ಕೆ ಸಾಕಾಗುವಷ್ಟು ಸ್ಯಾನಿಟರಿ ನ್ಯಾಪ್‌ಕಿನ್ ಗಳಿರುವ ಕಿಟ್ ಗಳನ್ನ ಒಟ್ಟಿಗೆ ವಿದ್ಯಾರ್ಥಿನಿಯರಿಗೆ ನೀಡಲಾಗುವುದು ಎಂದು ತಿಳಿಸಿದರು.
ಇದನ್ನು ಓದಿ ಮಾರ್ಚ್ 11ರಿಂದ ಬೆಂಗಳೂರು - ಕೊಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ
ನಮ್ಮ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಆರೋಗ್ಯ ಸಚಿವನಾದ ಬಳಿಕ ಯೋಜನೆಗೆ ಮರುಚಾಲನೆ ನೀಡುವುದಾಗಿ ಘೋಷಿಸಿದ್ದೆ.ಹೆಣ್ಣುಮಕ್ಕಳ ಆರೋಗ್ಯ ದೃಷ್ಟಿಯಿಂದ ಶುಚಿ ಯೋಜನೆ ಮಹತ್ವದ್ದಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿಯೇ ಯೋಜನೆಯನ್ನ ಪ್ರಾರಂಭಿಸಲಾಗಿತ್ತು. ಆದರೆ, ನಂತರದ ಸರ್ಕಾರದಲ್ಲಿ ಇಂಥಹ ಮಹತ್ವದ ಯೋಜನೆ ಏಕೆ ಸ್ಥಗಿತಗೊಳಿಸಲಾಯಿತು ಗೊತ್ತಿಲ್ಲ
ಇದನ್ನು ಓದಿ . ಚಾಕು ಇರಿದರೂ ಇಬ್ಬರು ಪುಂಡರನ್ನು ಸೆರೆ ಹಿಡಿದ ಪೊಲೀಸ್ ಕಾನ್ಸ್ಟೇಬಲ್..!
ಮಹಿಳೆಯರ ಪರವಾಗಿ ಕಾಂಗ್ರೆಸ್ ಸರ್ಕಾರ ಶಕ್ತಿ, ಗೃಹ ಲಕ್ಷ್ಮೀ ಯೋಜನೆಗಳನ್ನ ಜಾರಿಗೆ ತಂದಿರುವಾಗ ಹೆಣ್ಣುಮಕ್ಕಳಿಗೆ ಆರೋಗ್ಯ ದೃಷ್ಠಿಯಿಂದ ಆರಂಭವಾಗಿದ್ದ ಶುಚಿ ಯೋಜನೆ ಕಡೆಗಣಿಸಲು ಸಾಧ್ಯವಿಲ್ಲ. 47 ಕೋಟಿ ವೆಚ್ಚದಲ್ಲಿ 19 ಲಕ್ಷ ಶಾಲಾ ಕಾಲೇಜು ಹೆಣ್ಣುಮಕ್ಕಳಿಗೆ ವರ್ಷಕ್ಕಾಗುವಷ್ಟು ಸ್ಯಾನಿಟರಿ ನ್ಯಾಪ್‌ಕಿನ್ ಗಳನ್ನ ಉಚಿತವಾಗಿ ನೀಡುತ್ತಿದ್ದೇವೆ. ಎಷ್ಟೋ ಬಡ ಕುಟುಂಬದಲ್ಲಿರುವ ಹೆಣ್ಣುಮಕ್ಕಳಿಗೆ ಇದನ್ನ ಖರೀದಿಸಲು ಸಾಧ್ಯವಾಗುತ್ತಿರಲಿಲ್ಲ. ಈಗ ಶುಚಿ ಯೋಜನೆಯಿಂದ ಹೆಣ್ಣುಮಕ್ಕಳಲ್ಲಿ ಮಂದಹಾಸ ಮೂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸಂತಸ ವ್ಯಕ್ತಪಡಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ