ಪ್ರತಿಷ್ಠಿತ ಮೈಸೂರು ಮಹಾರಾಜ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ ಇನ್ನಿಲ್ಲ

ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ (62) ಧಾರವಾಡದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರು ತಮ್ಮ ಪತಿ ಮತ್ತು ಸಂಬಂಧಿಕರು, ಸ್ನೇಹಿತರು ಹಾಗೂ ತಮ್ಮ ಅಪಾರ ವಿದ್ಯಾರ್ಥಿ ಬಳಗವನ್ನು ಬಿಟ್ಟು ಅಗಲಿದ್ದಾರೆ.

Written by - Zee Kannada News Desk | Last Updated : Jan 6, 2024, 06:19 PM IST
  • ಪ್ರೊ. ಪ್ರಮೀಳಾ ಬಿ ಕುನ್ನೂರ್ ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 1990-94 ರಲ್ಲಿ ಅತಿಥಿ ಅಧ್ಯಾಪಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು
  • ನಂತರ ಅವರು ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ 1994 ರಲ್ಲಿ ಉಪನ್ಯಾಸಕರಾಗಿ (ಸಹಾಯಕ ಪ್ರಾಧ್ಯಾಪಕರಾಗಿ) ನೇಮಕಗೊಂಡರು
  • ಅವರ ಮಾರ್ಗದರ್ಶನದಲ್ಲಿ ಸುಮಾರು 10 ಅಭ್ಯರ್ಥಿಗಳು ಪಿಎಚ್‌ಡಿ ಪಡೆದಿದ್ದಾರೆ
ಪ್ರತಿಷ್ಠಿತ ಮೈಸೂರು ಮಹಾರಾಜ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ ಇನ್ನಿಲ್ಲ title=

ಹುಬ್ಬಳ್ಳಿ : ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ (62)  ನಗರದ ವಿದ್ಯಾನಗರದಲ್ಲಿರುವ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರು ತಮ್ಮ ಪತಿ ಮತ್ತು ಸಂಬಂಧಿಕರು, ಸ್ನೇಹಿತರು ಹಾಗೂ ತಮ್ಮ ಅಪಾರ ವಿದ್ಯಾರ್ಥಿ ಬಳಗವನ್ನು ಬಿಟ್ಟು ಅಗಲಿದ್ದಾರೆ.

ಕರ್ನಾಟಕ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮೊದಲ ಬ್ಯಾಚಿನ (1982) ವಿದ್ಯಾರ್ಥಿನಿ ಮತ್ತು ಈ ವಿಭಾಗದಿಂದ ಪಿಎಚ್ಡಿ ಪಡೆದ ಮೊದಲಿಗರಾಗಿದ್ದ ಇವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 1990-94 ರಲ್ಲಿ ಅತಿಥಿ ಅಧ್ಯಾಪಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ನಂತರ ಅವರು ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ 1994 ರಲ್ಲಿ ಉಪನ್ಯಾಸಕರಾಗಿ (ಸಹಾಯಕ ಪ್ರಾಧ್ಯಾಪಕರಾಗಿ) ನೇಮಕಗೊಂಡರು.

ಪ್ರೊ.ಪ್ರಮೀಳಾ ಬಿ ಕುನ್ನೂರು ಪ್ರತಿಷ್ಟಿತ ಮಹಾರಾಜ ಕಾಲೇಜಿನ ಪತ್ರಿಕ್ಯೋದ್ಯಮದಲ್ಲಿ 27 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಅವರ ಮಾರ್ಗದರ್ಶನದಲ್ಲಿ ಸುಮಾರು 10 ಅಭ್ಯರ್ಥಿಗಳು ಪಿಎಚ್‌ಡಿ ಪಡೆದಿದ್ದಾರೆ.ಈಗ ಅವರ ಅಗಲಿಕೆಗೆ ಅಪಾರ ವಿದ್ಯಾರ್ಥಿ ಬಳಗ ಕಂಬನಿ ಮಿಡಿದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News