R Ashoka : ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸಚಿವ ಆರ್ ಅಶೋಕ್

ದಿಶಾಂಕ್ ಆಪ್(Dishank App) ಡೌನ್‌ಲೋಡ್ ಮಾಡಿಕೊಳ್ಳಿ ನಂತರ ಅಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ, ಲಾಗ್ ಇನ್ ಆಗಿ. ನಾಗರೀಕರು ಈ ಕೆಳಕಂಡ ಕಾರಣಗಳಿಗಾಗಿ ಭೂಮಾಪನ ಇಲಾಖೆಗೆ ಅವರ ಸ್ವಂತ ಜಮೀನಿನ ನಕ್ಷೆಗಾಗಿ ಅರ್ಜಿ ಸಲ್ಲಿಸಬಹುದು. 

Written by - Prashobh Devanahalli | Last Updated : Apr 21, 2022, 07:46 PM IST
  • ಸಾರ್ವಜನಿಕರಿಗೆ ಸ್ವಯಂ ಸೇವೆಯ (Self service) ಮುಖಾಂತರ ಸರ್ಕಾರದ ಸೇವಾ ಸೌಲಭ್ಯ
  • ದಿಶಾಂಕ್ ಆಪ್(Dishank App) ಡೌನ್‌ಲೋಡ್ ಮಾಡಿಕೊಳ್ಳಿ
  • ಸರ್ಕಾರಿ ಭೂಮಾಪಕರು ಅಥವಾ ಪರವಾನಗಿ ಭೂಮಾಪಕರುಗಳಿಂದ ಸಿದ್ಧಪಡಿಸಲಾಗುತ್ತದೆ.
R Ashoka : ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸಚಿವ ಆರ್ ಅಶೋಕ್ title=

ಬೆಂಗಳೂರು : ಸಾರ್ವಜನಿಕರಿಗೆ ಸ್ವಯಂ ಸೇವೆಯ (Self service) ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಆದ್ಯತೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 

ಈ ಕುರಿತು ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಆಡಳಿತದಲ್ಲಿ ಸುಧಾರಣೆ ತಂದು ನಾಗರೀಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶವಾಗಿದೆ ಎಂದರು. 

ಇದನ್ನೂ ಓದಿ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್‍ವೈ ಹೆಸರು: ಇದು ಬೊಮ್ಮಾಯಿ ಕುರ್ಚಿ ಕಸರತ್ತಿನ ರಾಜಕಾರಣ ಎಂದ ಕಾಂಗ್ರೆಸ್

ದಿಶಾಂಕ್ ಆಪ್(Dishank App) ಡೌನ್‌ಲೋಡ್ ಮಾಡಿಕೊಳ್ಳಿ ನಂತರ ಅಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ, ಲಾಗ್ ಇನ್ ಆಗಿ. ನಾಗರೀಕರು ಈ ಕೆಳಕಂಡ ಕಾರಣಗಳಿಗಾಗಿ ಭೂಮಾಪನ ಇಲಾಖೆಗೆ ಅವರ ಸ್ವಂತ ಜಮೀನಿನ ನಕ್ಷೆಗಾಗಿ ಅರ್ಜಿ ಸಲ್ಲಿಸಬಹುದು. 

1) 11E ಸ್ಕೆಚ್

2) ತತ್ಕಾಲ್ ಪೋಡಿ

3) ವಿಭಾಗ- ಹಾಲಿ ಹೊಂದಿರುವ ಕೃಷಿ ಜಮೀನಿನಲ್ಲಿ ತಮ್ಮ ಶಾಸನಾತ್ಮಕ ಹಕ್ಕಿನಂತ ವೈಯಕ್ತಿಕ ಭಾಗಾಂಶವನ್ನು ತೋರಿಸುವ ಸಂಬಂಧ ಸ್ಕೆಚ್

4) ಭೂಪರಿವರ್ತನಾ ಪೂರ್ವ ಸ್ಕೆಚ್ 

ಪ್ರಸ್ತುತ ಜನರಿಗೆ ತಮ್ಮ ಸ್ವಂತ ಖಾಸಗಿ ಜಮೀನುಗಳಲ್ಲಿ ಮೇಲ್ಕಂಡ ಸ್ಕೆಚ್ ಗಳಿಗಾಗಿ ಸಲ್ಲಿಸುವ ಅರ್ಜಿಗಳನ್ನು ಸರ್ಕಾರಿ ಭೂಮಾಪಕರು ಅಥವಾ ಪರವಾನಗಿ ಭೂಮಾಪಕರುಗಳಿಂದ ಸಿದ್ಧಪಡಿಸಲಾಗುತ್ತದೆ.

ಸರ್ಕಾರಿ ಭೂಮಾಪಕರು ಮತ್ತು ಪರವಾನಗಿ ಭೂಮಾಪಕರ ಸಂಖ್ಯೆಯು ಸೀಮಿತವಾಗಿದ್ದು, ಪ್ರತಿ ತಿಂಗಳು ಒಂದು ಲಕ್ಷಕ್ಕಿಂತ ಹೆಚ್ಚಿನ ಅರ್ಜಿಗಳು ನಾಗರೀಕರಿಂದ ಸ್ವೀಕೃತವಾಗುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ಆರು ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಅಳತೆಗಾಗಿ ವಿವಿಧ ಹಂತಗಳಲ್ಲಿ ಬಾಕಿ ಇರುತ್ತವೆ.

ಇದನ್ನೂ ಓದಿ : Karnataka Rainfall : ರಾಜ್ಯದಲ್ಲಿ ಇನ್ನೂ 4 ದಿನ ಮಳೆ : ಬೆಂಗಳೂರಲ್ಲಿ ಮೋಡಕವಿದ ವಾತಾವರಣ 

ಇದರಿಂದಾಗಿ ನಾಗರೀಕರು ತಮ್ಮ ಸ್ವಂತ ಜಮೀನಿನಲ್ಲಿ ಯಾವುದೇ ರೀತಿಯ ಕ್ರಯ ಮತ್ತು ವಿಭಾಗ ಮಾಡಿಸಿಕೊಳ್ಳಲು ಅಗತ್ಯವಿರುವ ಸ್ಕೆಚ್ ಗಾಗಿ ಹಲವಾರು ತಿಂಗಳುಗಳು ಮತ್ತು ಕೆಲವೊಮ್ಮೆ ವರ್ಷದವರೆಗೆ ಕಾಯಬೇಕಾಗುತ್ತದೆ.

ಇದೆಲ್ಲ ಸಮಸ್ಯೆಗೆ ಪರಿಹಾರ ನೀಡಲು ನಾಗರಿಕರೇ ತಮ್ಮ ಜಮೀನಿಗೆ ಸ್ವಂತ ನಕ್ಷೆ ಮಾಡಿಕೊಳ್ಳಲು ಕಂದಾಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ. 11E ಸ್ಕೆಚ್, ತತ್ಕಾಲ ಪೋಡಿ ಇವುಗಳನ್ನು ಜನರು ಸ್ವಂತ ಜಮೀನಿಗೆ ತಾವೇ ಮಾಡಿಕೊಳ್ಳಲು ಅವಕಾಶ ನೀಡುತ್ತಿದ್ದೇವೆ. ಇದರಿಂದ ಸರ್ವೇ ವಿಳಂಬವಾಗಿ, ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಯುತ್ತದೆ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News