ಬೆಂಗಳೂರು: ಕಂದಾಯ ದಾಖಲೆಗಳಾದ ಆರ್ ಟಿಸಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆ "ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ" ಕಾರ್ಯಕ್ರಮಕ್ಕೆ ಮಾರ್ಚ್ 12 ಕ್ಕೆ ಚಿಕ್ಕಬಳ್ಳಾಪುರದ ಜಿಲ್ಲೆಯ ಗುಂಗೀರ್ಲಹಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಚಾಲನೆ ನೀಡಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಯಾರೋ ಮಾಡಿದ್ದಕ್ಕೆ ನೀವು ಸರ್ಟಿಫಿಕೇಟ್ ತಗೋತೀರಾ: ಕಾಂಗ್ರೆಸ್​ಗೆ ಎಚ್‌ಡಿಕೆ ಪ್ರಶ್ನೆ


ಅದೇ ರೀತಿ ರಾಜ್ಯಾದ್ಯಂತ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಡಳಿತದ ಎಲ್ಲ‌ ಅಧಿಕಾರಿಗಳು ರೈತರ ಮನೆ ಮನೆಗೆ ತೆರಳಿ ಕಂದಾಯ ದಾಖಲೆ ನೀಡಲಿದ್ದಾರೆ. ಸುಮಾರು 50 ಲಕ್ಷಕ್ಕೂ ಹೆಚ್ಚು ಅಧಿಕ ರೈತರಿಗೆ ದಾಖಲೆ ನೀಡಲು ಕಂದಾಯ ಇಲಾಖೆ (Revenue Department) ಸಿದ್ದತೆ ನಡೆಸಿದೆ ಎಂದು ಹೇಳಿದರು.


ರೈತನ ಜಮೀನಿಗೆ ಸಂಬಂಧಿಸಿದ ಭೂದಾಖಲೆಗಳನ್ನು "ರೈತನ ಮನೆ ಬಾಗಿಲಿಗೆ" ತಲುಪಿಸುವುದು ಒಂದು ಅತ್ಯುತ್ತಮ ಸೇವೆಯಾಗಿದೆ. ಜಮೀನಿನ ಈ ದಾಖಲೆಗಳು ರೈತನಿಗೆ (Farmers) ಸುರಕ್ಷಿತ ಭಾವನೆ ಮೂಡಿಸುತ್ತದೆ. ಈ ಪ್ರಕ್ರಿಯೆಯು ಅತ್ಯಮೂಲ್ಯ ಆಸ್ತಿಯನ್ನು ರಕ್ಷಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು (Income certificate) ಕೂಡ ಪ್ರಮುಖ ದಾಖಲೆಗಳಾಗಿದ್ದು, ಅದರ ಆಧಾರದ ಮೇಲೆ ನಾಗರಿಕರು ಶೈಕ್ಷಣಿಕ, ಉದ್ಯೋಗ ಮತ್ತು ಇತರೆ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಸಕಾಲದಲ್ಲಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.


ಇದನ್ನೂ ಓದಿ : ಯಾದಗಿರಿ: ನೀರಿಗಾಗಿ ವಿದ್ಯಾರ್ಥಿಗಳ ಪರದಾಟ!


ನಮ್ಮ ಸರ್ಕಾರವು ಕರ್ನಾಟಕದಾದ್ಯಂತ ರೈತರಿಗೆ ಸೇವೆ ಸಲ್ಲಿಸಲು ಮತ್ತು ರೈತರ ಸಬಲೀಕರಣಕ್ಕಾಗಿ 12-03-2022 ರಂದು ರಾಜ್ಯಾದ್ಯಂತ (1) ಆರ್‌ಟಿಸಿ (2) ಜಮೀನಿನ ಅಟ್ಲಾಸ್ ನಕ್ಷೆ (3) ಜಾತಿ ಪ್ರಮಾಣಪತ್ರ (4) ಆದಾಯ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಐತಿಹಾಸಿಕ ಯೋಜನೆಯನ್ನು ಪ್ರಾರಂಭಿಸಿ 50 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳ ಮನೆಗೆ ತಲುಪಿಸಲಾಗುತ್ತದೆ. ಈ ಮೂಲಕ ರೈತ ಕುಟುಂಬಗಳಿಗೆ ಆಂದೋಲನ ರೀತಿಯಲ್ಲಿ 5 ಕೋಟಿಗೂ ಹೆಚ್ಚು ದಾಖಲೆಗಳನ್ನು ತಲುಪಿಸಲಾಗುತ್ತದೆ ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.