ನೀರು ಬಿಡಲು ಸಾಧ್ಯವಿಲ್ಲವೆಂದು ನಾಳೆಯೇ ಸುಪ್ರೀಂಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ: ಸಿದ್ದರಾಮಯ್ಯ

Cauvery Water Sharing Dispute: ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ, ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Sep 29, 2023, 09:33 PM IST
  • ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್‌ಗೆ ನಾಳೆಯೇ ಮರುಪರಿಶೀಲನಾ ಅರ್ಜಿ
  • ರಾಜ್ಯದಲ್ಲಿ ಶಾಂತಿಯುತ ಬಂದ್ ನಡೆಯಲು ಸಹಕರಿಸಿದ ಸಾರ್ವಜನಿಕರಿಗೆ, ಸಂಘ-ಸಂಸ್ಥೆಗಳಿಗೆ ಸಿಎಂ ಅಭಿನಂದನೆ
  • ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಿಎಂ ಮೆಚ್ಚುಗೆ
ನೀರು ಬಿಡಲು ಸಾಧ್ಯವಿಲ್ಲವೆಂದು ನಾಳೆಯೇ ಸುಪ್ರೀಂಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ: ಸಿದ್ದರಾಮಯ್ಯ title=
ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಿಎಂ ಮೆಚ್ಚುಗೆ

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು, ಅಡ್ವೊಕೇಟ್ ಜನರಲ್ ಅವರೊಂದಿಗಿನ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್‌ಗಳು ಇಂದು ಸಭೆಯಲ್ಲಿ ಭಾಗವಹಿಸಿದ್ದರು. ಅವರ ಅನುಭವದ ಆಧಾರದ ಮೇಲೆ ಕೆಲವು ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆಗಳನ್ನು ಪರಿಗಣಿಸಿ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರಿಗೆ, ಸಂಘ-ಸಂಸ್ಥೆಗಳಿಗೆ ಅಭಿನಂದನೆಗಳು. ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ’ ಎಂದು ಸಿಎಂ ಸಿದ್ದರಾಮಯ್ಯನವರು ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾವೇರಿ ಹೋರಾಟದಲ್ಲಿ ʼತಮಿಳು ನಟ ಸಿದ್ಧಾರ್ಥ್ʼ ಕ್ಷಮೆ ಕೇಳಿದ ಶಿವಣ್ಣ..!

‘ಮುಖ್ಯವಾಗಿ ರಾಜ್ಯದ ನೀರಾವರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪರಿಣಿತರ ಸಲಹಾ ಸಮಿತಿಯನ್ನು ರಚಿಸಿ, ಡಾಟಾ ಸಂಗ್ರಹ, ಸಲಹೆ ನೀಡುವ ಕಾರ್ಯವನ್ನು ಮಾಡಬೇಕು. ಅಂತರರಾಜ್ಯ ಜಲವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ ಸೂಚನೆ, ಕಾನೂನು ತಂಡಕ್ಕೆ ಮಾಹಿತಿ ನೀಡಲು ಕೂಡ ಸಮಿತಿ ಅಗತ್ಯ ಎನ್ನುವ ಸಲಹೆ ಬಂದಿದೆ. ಇದರಂತೆ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.

‘ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ, ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3,000 ಕ್ಯೂಸೆಕ್ ನೀರು ಬಿಡಲು ಆದೇಶಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ ಸೂಚಿಸಿದ್ದಾರೆ’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್‍ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಹಾಗಾಗಿ ತೀವ್ರವಾಗಿ ಇದನ್ನು ಮಂಡಿಸಬೇಕು ಎಂದು ಸಲಹೆ ನೀಡಿದ್ದಾರೆ. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ ಕುಡಿಯುವ ನೀರಿಗೆ ಅದನ್ನು ಬಳಸಲಾಗುವುದು. ಸಂಕಷ್ಟ ಬಂದಾಗ ತಮಿಳುನಾಡಿಗೆ ನೀರು ಬಿಡಬಹುದು ಎಂದು ಸಲಹೆ ನೀಡಿದ್ದಾರೆ’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: Cauvery dispute: ಕಾವೇರಿ-ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಹೊಸ ಸವಾಲು ಹಾಕಿದ ಬಿಜೆಪಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News