ಬೆಂಗಳೂರು: ರಾಜ್ಯಗಳಿಗೆ ಅಕ್ಕಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರದ ಆದೇಶದ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10 KG ಅಕ್ಕಿ ನೀಡಲು ಪಣ ತೊಟ್ಟಿದೆ.ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು FCIನಿಂದ ಖರೀದಿಗೆ ನಾವು ಮುಂದಾಗಿರುವಾಗ, ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.
ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10KG ಅಕ್ಕಿ ನೀಡಲು ಪಣ ತೊಟ್ಟಿದೆ.
ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು FCIನಿಂದ ಖರೀದಿಗೆ ನಾವು ಮುಂದಾಗಿರುವಾಗ, ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ.
1/2— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 14, 2023
ಇದನ್ನೂ ಓದಿ-Diabetes Alert: ಮಧುಮೆಹಿಗಳು ಮರೆತೂ ಕೂಡ ಈ ಹಣ್ಣುಗಳನ್ನು ಸೇವಿಸಬಾರದು!
ಕಾಂಗ್ರೆಸ್ ಗ್ಯಾರೆಂಟಿಗಳು ಜನರಿಗೆ ತಲುಪಲು ಬಿಡದಂತೆ ಕೇಂದ್ರ BJP ಸರ್ಕಾರ ಈ ರೀತಿ ಷಡ್ಯಂತ್ರ ನಡೆಸಲು ಮುಂದಾಗಿರುವುದು ನಾಚಿಗೇಡಿನ ವಿಚಾರ.ಈಗಾಗಲೇ ರಾಜ್ಯದಲ್ಲಿ BJP 63 ಮತ್ತೊಂದು ಸೀಟಿಗೆ ತೃಪ್ತಿಪಡಬೇಕಾಗಿದೆ.ಇದೇ ರೀತಿ ದುಷ್ಟ ರಾಜಕಾರಣ ಮುಂದುವರೆಸಿದರೆ, ಮುಂದೆ ಅದು 6 ಮತ್ತು 3 ಆಗಲಿದೆ. ಇದು ಗ್ಯಾರಂಟಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ