`ಸಂತೋಷ್ ಆತ್ಮಹತ್ಯೆ ಹಿಂದಿನ ಕಿಂಗ್‌ಪಿನ್ ಡಿಕೆಶಿ ಏಕೆ ಆಗಿರಬಾರದು?`
ಏಪ್ರಿಲ್ 12 ರಂದು `ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ` ಎಂದು ವಾಟ್ಸ್‌ಆಪ್ ಮೂಲಕ ಸಂದೇಶ ಕಳುಹಿಸಿ ಬೆಳಗಾವಿಯ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಚಿಕ್ಕಮಗಳೂರು: "ಸಂತೋಷ್ ಆತ್ಮಹತ್ಯೆ ಪ್ರಕರಣದ ಹಿಂದಿರುವ ಕಿಂಗ್‌ಪಿನ್ ಡಿ.ಕೆ ಶಿವಕುಮಾರ್ ಏಕೆ ಆಗಿರಬಾರದು?" ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಪ್ರಶ್ನಿಸಿದ್ದಾರೆ.
ಇದನ್ನು ಓದಿ: ಅದ್ಭುತ ಲಾಭಗಳನ್ನೊಳಗೊಂಡ ಈ ಯೋಜನೆಯಿಂದ Jio-Airtel ಗೆ ಭಾರಿ ಪೈಪೋಟಿ
ಸಚಿವ ಕೆ.ಎಸ್ ಈಶ್ವರಪ್ಪರನ್ನು ರಾಜಕೀಯವಾಗಿ ಕುಗ್ಗಿಸುವ ಕುತಂತ್ರವನ್ನು ಕಾಂಗ್ರೆಸ್ ರೂಪಿಸಿದೆ. ಈ ಹಿಂದೆ ರಮೇಶ್ ಜಾರಕಿಹೊಳಿ ಪ್ರಕರಣದಲ್ಲೂ ಡಿಕೆ ಶಿವಕುಮಾರ್ ಅವರ ಕೈವಾಡವಿತ್ತು. ಹೆಣ್ಣನ್ನು ಬಳಸಿಕೊಂಡು ರಮೇಶ್ ಜಾರಕಿಹೊಳಿಯವರ ರಾಜೀನಾಮೆಯನ್ನು ಪಡೆದರು. ಹತಾಶೆಯಿಂದ ಈ ರೀತಿಯ ಕೃತ್ಯಗಳನ್ನು ಕಾಂಗ್ರೆಸ್ ಮತ್ತು ಡಿ.ಕೆ. ಶಿವಕುಮಾರ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನು ಓದಿ: KGF 2 ಹವಾ: ಇದ್ದಿಲು-ಮರಳಲ್ಲಿ ಮೂಡಿತು ʼರಾಕಿಭಾಯ್ ಪೋಸ್ಟರ್ʼ
ಏಪ್ರಿಲ್ 12 ರಂದು "ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ" ಎಂದು ವಾಟ್ಸ್‌ಆಪ್ ಮೂಲಕ ಸಂದೇಶ ಕಳುಹಿಸಿ ಬೆಳಗಾವಿಯ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಳಿಕ ಈಶ್ವರಪ್ಪನವರು ರಾಜೀನಾಮೆ ನೀಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಕಾಳಿಮಠದ ಋಷಿಕುಮಾರ ಸ್ವಾಮೀಜಿ ಈ ಹೇಳಿಕೆಯನ್ನು ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.