Road Accident: ವಿದ್ಯಾರ್ಥಿಗಳನ್ನು ಶಾಲೆಗೆ ಹೊತ್ತೊಯ್ಯುತ್ತಿದ್ದ ಖಾಸಗಿ ವಾಹನ ಪಲ್ಟಿ, 07 ಮಕ್ಕಳ ಸ್ಥಿತಿ ಗಂಭೀರ
ಖಾಸಗಿ ವಾಹನ ದಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿದ್ದರೆ, ಅವರಲ್ಲಿ ಏಳು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.
ರಾಯಚೂರು: ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಖಾಸಗಿ ವಾಹನ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು, ಏಳು ಮಕ್ಕಳ ಸ್ಥಿತಿ ಗಂಭೀರವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕುಣೆಕೆಲ್ಲೂರು ಗ್ರಾಮದ ಬಳಿ ಈ ದುರಂತ ಘಟನೆ ಸಂಭವಿಸಿದೆ.
ಖಾಸಗಿ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿದ್ದರೆ, ಅವರಲ್ಲಿ ಏಳು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರ ಗಾಯಗೊಂಡಿರುವ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿಗೆ ಶಿಫ್ಟ್ ಮಾಡಲಾಗಿದೆ. ಇನ್ನುಳಿದ 13 ಮಕ್ಕಳಿಗೆ ಲಿಂಗಸ್ಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ- Bangalore Population: ‘10 ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ ದುಪ್ಪಟ್ಟು’
ವಾಸ್ತವವಾಗಿ, ಈ ಗ್ರಾಮದಲ್ಲಿ ಬಸ್ ಸೌಕರ್ಯವಿಲ್ಲದ ಕಾರಣದಿಂದಾಗಿ ಪ್ರತಿ ನಿತ್ಯ ಇಲ್ಲಿಂದ ಹತ್ತಾರು ವಿದ್ಯಾರ್ಥಿಗಳು ಖಾಸಗಿ ವಾಹನದಲ್ಲಿಯೇ ಶಾಲೆಗೆ ತೆರಳುತ್ತಿದ್ದರು. ಸಂತೆಕೆಲ್ಲೂರಿನ ಸರ್ಕಾರಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಇಂದು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ- ಬೆಂಗಳೂರಿನ ಜನಸಂಖ್ಯೆ ಹೆಚ್ಚಳದ ಬಗ್ಗೆ ಬಿಬಿಎಪಿ ಕಮಿಷನರ್ ನೀಡಿದ ಎಚ್ಚರಿಕೆ ಏನು ಗೊತ್ತೇ?
ಇನ್ನು ಪಲ್ಟಿಯಾದ ವಿದ್ಯಾರ್ಥಿಗಳು ಸಾಗುತ್ತಿದ್ದ ಖಾಸಗಿ ವಾಹನದಲ್ಲಿ ಸುಮಾರು 30 ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.