ಬೆಂಗಳೂರು : ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


COMMERCIAL BREAK
SCROLL TO CONTINUE READING

ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. ಇದು ಬಹಳ ದುರ್ದೈವದ ಸಂಗತಿ. ದುಡಿಮೆ ಮಾಡಲು ಬಂದವರ ಬದುಕೇ ಇಲ್ಲದಂತಾಗಿರುವುದು ದಿಗ್ಭ್ರಮೆ ಹುಟ್ಟಿಸಿದೆ. ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಮೃತಪಟ್ಟವರಿಗೆ ಪ್ರಧಾನಮಂತ್ರಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿ, ಮೃತಪಟ್ಟವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಿದ್ದಾರೆ. ಇದಕ್ಕಾಗಿ ಪ್ರಧಾನ ಮಂತ್ರಿಯವರನ್ನು ಅಭಿನಂದಿಸುತ್ತೇನೆ.   ಅಪಘಾತದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.


ಇದನ್ನೂ ಓದಿ : KSRTC : ಗಣೇಶ ಹಬ್ಬಕ್ಕೆ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ..!


ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸಧ್ಯದಲ್ಲಿಯೇ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.