ಮಂಗಳೂರು: ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನ ಹಲವೆಡೆ ಗುಡ್ಡಗಳು ಕುಸಿದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. 


COMMERCIAL BREAK
SCROLL TO CONTINUE READING

ಬೆಳ್ತಂಗಡಿ ಸಮೀಪ ಸೋಮವಾರ ತಡ ರಾತ್ರಿ ಗುಡ್ಡ ಕುಸಿದ ಪರಿಣಾಮ ರಸ್ತೆಗಳು ಮುಚ್ಚಿಹೋಗಿದ್ದು, ಎರಡೂ ಕಡೆಯಿಂದ ವಾಹನಗಳು ಸಾಲುಗಟ್ಟಿ ನಿಂತಿವೆ. ಇದರಿಂದ ಪ್ರಯಾಣಿಕರಿಗೆ ಬಹಳ ತೊಂದರೆಯಾಗಿದ್ದು, ರಾತ್ರಿಯಿಂದ ರಸ್ತೆ ಮಧ್ಯೆ ಸಿಲುಕಿರುವ ಪ್ರಯಾಣಿಕರಿಗೆ ಕೆಲ ಸವ್ಯಂ ಸೇವಕರು ಆಹಾರ ಮತ್ತು ನೀರು ಒದಗಿಸಿದ್ದಾರೆ. 


ರಸ್ತೆಯನ್ನು ಮುಚ್ಚಿಕೊಂಡಿರುವ ಮಣ್ಣು ತೆರವು ಕಾರ್ಯಾಚರಣೆಗೆ ಈಗಾಗಲೇ ಹಿಟಾಚಿ, ಜೆಸಿಪಿಗಳು ಸ್ಥಳಕ್ಕಾಗಮಿಸಿದ್ದು, ಕಾರ್ಯನಿರತವಾಗಿವೆ. ಆದರೆ, ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕೆಲಸ ಆಮೆಗತಿಯಲ್ಲಿ ಸಾಗಿದೆ. ಹೀಗಾಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, 500ಕ್ಕೂ ಹೆಚ್ಚು ವಾಹನಗಳು ಸಾಲುಗಟ್ಟಿ ನಿಂತಿವೆ.