ಚಾಮರಾಜನಗರ: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ಕೂಡ ಚುನಾವಣಾ ವಿಷಯವಾಗಿದ್ದು ಅಭ್ಯರ್ಥಿ ಪ್ರಿಯಾಂಕಾ ವಾದ್ರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕರ್ನಾಟಕದ ಡಿಸಿಎಂ ರಾತ್ರಿ ಸಂಚಾರ ತೆರವಿನ ಮೂಲಕ ಮತಬೇಟೆಗೆ ಇಳಿದಿದ್ದಾರೆ.


COMMERCIAL BREAK
SCROLL TO CONTINUE READING

ಬಹಿರಂಗ ಸಭೆ, ರೋಡ್ ಶೋಗಳಲ್ಲಿ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ಮಾರ್ಗೋಪಾಯ ಕಂಡುಕೊಳ್ಳುತ್ತೇನೆ, ಚುನಾವಣೆ ಬಳಿಕ ಎರಡು ರಾಜ್ಯಗಳ ಜೊತೆ ಮಾತನಾಡುವುದಾಗಿ ರಾಗಾ, ಪ್ರಿಯಾಂಕಾ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಡಿಸಿಎಂ‌ ಡಿ.ಕೆ.ಶಿವಕುಮಾರ್‌ ರಾತ್ರಿ ಸಂಚಾರ ತೆರವಿಗೆ ಪರಿಹಾರ ಕಂಡುಕೊಳ್ಳುವುದಾಗಿಯೂ ಭರವಸೆ ಕೊಟ್ಟಿದ್ದಾರೆ.


ಇದನ್ನೂ ಓದಿ: ಜೋಗಿ ನಟಿ ಜೆನಿಫರ್ ಕೊತ್ವಾಲ್ ನೆನಪುಂಟೇನ್ರಿ, ಈಗ ಎಲ್ಲಿದ್ದಾರೆ ಏನ್ಮಾಡ್ತಿದ್ದಾರೆ ಗೊತ್ತೇ ಚುಕುಬುಕು ರೈಲು ಸುಂದರಿ!!


ಡಿಸಿಎಂ‌ ಡಿ.ಕೆ.ಶಿವಕುಮಾರ್ ಚುನಾವಣಾ ಭರವಸೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ಟ್ವೀಟ್ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಡಿಕೆಶಿ ನೀಡಿರುವ ಹೇಳಿಕೆಯು ಬೇಜವಾಬ್ದಾರಿ ಮತ್ತು ಖಂಡನೀಯವಾಗಿದೆ, ಬಂಡೀಪುರದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ವೈವಿಧ್ಯತೆಯು ಅದರೊಳಗೆ ಅಭಿವೃದ್ಧಿ ಹೊಂದುತ್ತಿರುವ ವಿವಿಧ ಪ್ರಭೇದಗಳ ವನ್ಯಜೀವಿಗಳಿಗೆ ಸೇರಿದ ಸಂಪತ್ತು. ಈ ಅಭಯಾರಣ್ಯದ ಮೂಲಕ ರಾತ್ರಿ ಪ್ರಯಾಣಕ್ಕೆ ಅವಕಾಶ ನೀಡುವುದರಿಂದ ವನ್ಯಜೀವಿಗಳಿಗೆ ಅಪಾಯವಿದೆ ಮತ್ತು ಮಾನವ-ವನ್ಯಜೀವಿ ಸಂಘರ್ಷಕ್ಕೆ ಇದು ಎಡೆ ಮಾಡಿಕೊಡುತ್ತದೆ.ಬೇರೆ ರಾಜ್ಯದಲ್ಲಿನ ಚುನಾವಣಾ ಲಾಭಕ್ಕಾಗಿ ಕರ್ನಾಟಕದ ವನ್ಯಜೀವಿಗಳಿಗೆ ಧಕ್ಕೆ ತರುವುದು ಸಮಂಜಸವಲ್ಲ. ನಮ್ಮ ಸರ್ಕಾರವು ಈ ಪರಿಸರ ವಲಯಗಳ ರಕ್ಷಣೆಯ ನಿಟ್ಟಿನಲ್ಲಿ ಯಾವುದೆ ರಾಜಿ ಮಾಡಿಕೊಳ್ಳದೆ ರಕ್ಷಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ. 


ಸಂಸದರ ಟ್ವೀಟ್ ಗೆ ಬೆಂಬಲ ವ್ಯಕ್ತಪಡಿಸಿ ನೆಟಿಜನ್ಸ್ ಕಮೆಂಟ್ ಮಾಡುತ್ತಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ