ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವಲ್ಲಿ ಕೇಂದ್ರ ಕೃಷಿ ಬೆಲೆ ಆಯೋಗದ ಪಾತ್ರ ಬಹಳ‌ ಮಹತ್ವವಾದದ್ದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಕೇಂದ್ರ ಸರ್ಕಾರದ‌ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ  ಸಹಭಾಗಿತ್ವದಲ್ಲಿ  ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿ: 2025- 26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.


ಇದನ್ನೂ ಓದಿ: Viral News: 8ನೇ ಮದುವೆಯಾಗಲು ಹೋಗಿ ಸಿಕ್ಕಿಬಿದ್ದವಳಿಗೆ 7 ಮಂದಿ ಗಂಡಂದಿರು!


ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿಯಾಗಬೇಕು. ಡಾ ಸ್ವಾಮಿನಾಥನ್ ಅವರ ವರದಿ ಜಾರಿಯಾಗಬೇಕು. ಜಾಗತಿಕ  ಕೃಷಿಯಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯದ ಪಾತ್ರ ಮಹತ್ವದ್ದು. ಅನೇಕ ಏಳು  ಬೀಳುಗಳ ನಡುವೆಯೂ ನಾವು ಸ್ಥಿರತೆ ಕಂಡುಕೊಂಡಿದ್ದೇವೆ. ಕಳೆದ ಎರೆಡು ದಶಕಗಳಲ್ಲಿ ಬಹುತೇಕ ವರ್ಷ ಬರ ,ಕೆಲ ವರ್ಷ ಅತಿವೃಷ್ಟಿ ನಮ್ಮನ್ನು ಕಾಡಿದೆ. ಇಂತಹ ಸಂದರ್ಭಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕರಗಳೆರೆಡೂ ರೈತರ ಸಂಕಷ್ಟಕ್ಕೆ ‌ಇನ್ನಷ್ಟು ಹೆಚ್ಚು ಸ್ಪಂದಿಸಿ ನೆರವಾಗಬೇಕಿದೆ ಎಂದು ಹೇಳಿದರು.


 ರಾಜ್ಯ ಸರ್ಕಾರ ರೈತರ ಹಿತ ಕಾಯಲು ಅನೇಕ ಪ್ರಮುಖ ಯೋಜನೆ ರೂಪಿಸಿ ಜಾರಿಗೊಳಿಸಿದೆ. ಇದನ್ನು ತಲುಪಿಸುವಲ್ಲಿ ಅಧಿಕಾರಿಗಳ ಜವಾಬ್ದಾರಿ ದೊಡ್ಡದು ಎಂದು ತಿಳಿಸಿದರು.


ಕೇಂದ್ರ ಕೃಷಿ ವೆಚ್ಚ ಮತ್ತು ಬೆಲೆ ಆಯೋಗದ ಅಧ್ಯಕ್ಷರಾದ ವಿಜಯ್ ಪಾಲ್ ಶರ್ಮ  ಕೃಷಿ ಸವಾಲುಗಳು ,ಬೆಂಬಲ ಬೆಲೆ ನಿಗಧಿ‌ ಮಾನದಂಡಗಳು, ಆಗಬೇಕಿರುವ ಸುಧಾರಣೆಗಳು, ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾತ್ರದ ಬಗ್ಗೆ  ವಿವರಿಸಿದರು.


ಸುಸ್ಥಿರ ಕೃಷಿಗೆ ಬೆಲೆ ಸ್ಥಿರೀಕರಣದ ಜೊತೆಗೆ ಉತ್ಪಾದನೆ ,ಮಾರಾಟವೆಚ್ಚದಲ್ಲಿ  ಕಡಿತ ಮುಖ್ಯವಾಗಿದೆ .ಇದಕ್ಕೆ ತಂತ್ರಜ್ಞಾನ , ಯಾಂತ್ರೀಕರಣಗಳ ವರ್ಗಾವಣೆ ಜೊತೆಗೆ ವಿಶ್ವ ವಿದ್ಯಾನಿಲಯಗಳ  ಸಂಶೋಧನೆಗಳು  ಸುಲಭವಾಗಿ  ಕೃಷಿಕರ ನೆಲ ತಲುಪಬೇಕು  ಎಂದು ಹೇಳಿದರು.


ಇದನ್ನೂ ಓದಿ:  ಆ ಭಾಗವನ್ನು ಬಾಡಿಗಾರ್ಡ್ ಅಸಭ್ಯವಾಗಿ ಮುಟ್ಟಿದ..! ಕಹಿ ಅನುಭವ ಹಂಚಿಕೊಂಡ ಸ್ಟಾರ್‌ ನಟಿ


ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ ,ಕೇರಳ, ತಮಿಳುನಾಡು,ಆಂದ್ರ ಪ್ರದೇಶ ,ತೆಲೆಂಗಾಣ ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಸಭೆಯಲ್ಲಿ  ಪಾಲ್ಗೊಂಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ