)
Anjanadri Hills Ropeway Construction
: 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾವೇರಿ ನಿವಾಸದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ʼಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರತೆ
ಈ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ 200 ಕೋಟಿ ರೂ.ಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಈ ಕಾಮಗಾರಿಗಳಿಗೆ 10 ಕೋಟಿ ರೂ.ಗಳನ್ನ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದೆ. ಮಂಜೂರಾಗಿರುವ ಕಾಮಗಾರಿಗಳನ್ನ ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ ಪ್ರಸ್ತಾಪಿಸಿರುವ 77.28 ಖಾಸಗಿ ಜಮೀನನ್ನ ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ನನ್ನ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆಯ ಮುಖ್ಯಾಂಶಗಳು:
* ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು… pic.twitter.com/RFqK6MHN8u
— Siddaramaiah (@siddaramaiah) September 3, 2025
ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101 ಎಕರೆ 30 ಗುಂಟೆ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನ ಆರ್ಥಿಕ ಇಲಾಖೆಯಿಂದ ಒದಗಿಸಲಾಗುವುದು. ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನ ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.