ಬೆಂಗಳೂರು: ನಮ್ಮವರೇ ಬೆಂಗಳೂರನ್ನು ಅವಹೇಳನ‌ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ ಬಗ್ಗೆ ಏನನ್ನು ಬಿಂಬಿಸಲು ಹೊರಟಿದ್ದೀರಿ ಎಂದು ಬಿಜೆಪಿಯವರನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರಶ್ನಿಸಿದರು.


COMMERCIAL BREAK
SCROLL TO CONTINUE READING

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಅನೇಕ‌ಸಲ ಹೇಳಿದ್ದಾರೆ. ಇದಕ್ಕೆ ನಿಗದಿತವಾದ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ. ಎಲ್ಲರ ಆಡಳಿತಾವಧಿಯಲ್ಲಿಯೂ ಮಳೆಗಾಲದಲ್ಲಿ ರಸ್ತೆ ಗುಂಡಿ ಬೀಳುವುದು, ಚರಂಡಿಯಲ್ಲಿ ಕಸ ತುಂಬಿಕೊಂಡು ಫ್ಲಡ್ ಆಗಿದೆ. ಇದನ್ನು ಆಧರಿಸಿ ಬೆಂಗಳೂರಿನ ಬಗ್ಗೆ ಕೆಟ್ಟದಾಗಿ ಬಿಂಬಿಸುವುದು ಸರಿಯಲ್ಲ‌ ಎಂದರು.


ಇದನ್ನೂ ಓದಿ: Kavya Maran: ಫೈನಲ್‌ ಎಂಟ್ರಿ ಕೊಟ್ಟ ಸನ್‌ರೈಸರ್ಸ್.. ತಂಡದ ಒಡತಿ ಕಾವ್ಯಾ ರಿಯಾಕ್ಷನ್‌ಗೆ ಫ್ಯಾನ್ಸ್‌ ಫುಲ್‌ ಫಿದಾ!!


ಉಡ್ತಾ ಬೆಂಗಳೂರು, ಬ್ರ್ಯಾಂಡ್ ಬೆಂಗಳೂರು ಅಲ್ಲ ಗುಂಡಿ ಬೆಂಗಳೂರು ಅನ್ನುವುದು. ಹೊರ ದೇಶದವರಿಗೆ ಏನು ಚಿತ್ರಣ ಬಿಂಬಿಸಲು ಹೊರಟಿದ್ದೀರಿ? ನಮ್ಮ‌ ಮೇಲೆ, ನಮ್ಮ ಸರ್ಕಾರದ ಮೇಲೆ‌ ಆರೋಪಿಸಲಿ.‌ ತಪ್ಪುಗಳಿದ್ದರೆ  ಸರಿಪಡಿಸಿಕೊಳ್ಳುತ್ತೇವೆ. ಜವಾಬ್ದಾರಿಯುತವಾಗಿ ನಡೆದುಕೊಳ್ಳದಿದ್ದರೆ, ನೀವೆ ಬೆಂಗಳೂರಿಗೆ ಕೆಟ್ಟ ಹೆಸರು ತರುತ್ತಿದ್ದೀರಿ ಎಂದು ಎಚ್ಚರಿಸಿದರು.


ಅನೇಕ ವಿಚಾರಗಳ ಬಗ್ಗೆ ಬಿಜೆಪಿಯವರು ಇಲ್ಲ-ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸರಿಯಾದ ಸಂದರ್ಭದಲ್ಲಿ ಉತ್ತರಿಸಲಾಗುವುದು. ಏನಾದರೂ ನಿರ್ದಿಷ್ಟವಾಗಿ ಹೇಳುವುದಿದ್ದರೆ ಹೇಳಲಿ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ನೋಡಿಕೊಳ್ಳಲು ಪೊಲೀಸ್ ಕಮಿಷನರ್ ಇದ್ದಾರೆ. ಪೊಲೀಸ್ ಇಲಾಖೆ ಇದೆ. ಅವರಿಗೆ ತಿಳಿಸಿದರೆ ಕ್ರಮ ತೆಗೆದುಕೊಳ್ಳುತ್ತಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸದಿದ್ದರೆ ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ. ಹೇಳಿಕೆಗಳಿಂದ ಪರಿಹಾರ ಕಂಡುಕೊಳ್ಳಲಾಗುವುದಿಲ್ಲ  ಎಂದರು


ಮುಖ್ಯಮಂತ್ರಿ, ಪ್ರಧಾನಮಂತ್ರಿಗೆ ಬರೆದ ಪತ್ರ ಮೇ 21ರಂದು ತಲುಪಿದೆ ಎಂಬುದಾಗಿ ವಿದೇಶಾಂಗ ಸಚಿವರು ಹೇಳಿದ್ದಾರೆ. ಮುಖ್ಯಮಂತ್ರಿಯವರು ಬರೆದಿದ್ದ ಪತ್ರ ವಿಚಾರವನ್ನು ಪ್ರಧಾನಮಂತ್ರಿ ಕಚೇರಿಯವರು ವಿದೇಶಾಂಗ ಇಲಾಖೆಯ ಕಚೇರಿಗೆ ತಿಳಿಸಿಲ್ಲ ಎಂಬುದು ಗೊತ್ತಾಗುತ್ತದೆ. ಪತ್ರಕ್ಕೆ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಬೆಲೆ ಸಿಗಲಿಲ್ಲವೇ? ವಿದೇಶಾಂಗ ಇಲಾಖೆಯ ಕಚೇರಿಗೆ ತಿಳಿಸಿಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಯಾವ ರೀತಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಅನ್ನುವುದನ್ನು ಇದರಿಂದ ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು.


ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದಾದ ಬಳಿಕ ದೇಶಕ್ಕೆ ವಾಪಸ್ ಆಗಬೇಕಾಗುತ್ತದೆ. ಆ ದೇಶದವರು ಇಟ್ಟುಕೊಳ್ಳಲು ಆಗುವುದಿಲ್ಲ ಎಂದರು.


ದಾವಣಗೆರೆ ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, ದೂರು ಇದ್ದ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಆತನಿಗೆ 7 ನಿಮಿಷದೊಳಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಅದಕ್ಕೆ ಅವರು ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ, ಠಾಣೆಗೆ ನುಗ್ಗಲು ಯತ್ನಿಸಿದ್ದಾರೆ ಎಂದರು.


ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಗೊತ್ತಾಗಲಿದೆ. ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಘಟನೆಯಲ್ಲಿ ಪೇದೆಯೊಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.


ರೌಡಿಸಂ ಮಾಡುವರನ್ನು ಸುಮ್ಮನೆ ಬಿಡುವುದಿಲ್ಲ. ಪೊಲೀಸ್ ಠಾಣೆಗೆ ಬಂದು ಧಮ್ಕಿ ಹಾಕುವರ ಬಗ್ಗೆ ಮೃದು ಧೋರಣೆ ತೋರಿಸಲು ಆಗುತ್ತಾ? ಪೊಲೀಸರ ತಲೆ ಕತ್ತರಿಸುತ್ತೀನಿ ಅನ್ನುವರನ್ನ  ಬಿಡುವುದಕ್ಕಾಗುತ್ತದೆಯೇ? ಅಂತವರ ಮೇಲೆ ಕಾನೂನಿನಲ್ಲಿ ಇರುವ ಅವಕಾಶದಂತೆ‌ ಕ್ರಮ ಜರುಗಿಸಲಾಗುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಮಾದರಿ ಮಾಡುತ್ತೀವಿ ಅಂದಿರುವುದು ಗಮನಕ್ಕೆ ಬಂದಿದೆ. ಮುಲಾಜಿಲ್ಲದೇ ಕಾನೂನು‌ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.


ಶಾಸಕ ಹರೀಶ್ ಪೂಂಜಾನನ್ನು ಬಂಧಿಸಿ‌ ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೊಲೀಸರು ದೋಷರೋಪಣಾ ಪಟ್ಟಿ ಸಲ್ಲಿಸುತ್ತಾರೆ. ಪ್ರಕರಣ ಜನ ಪ್ರತಿನಿಧಿಗಳ ವಿಶೇಷ ನ್ಯಾಯಲಯದ ಮುಂದೆ ಬರುತ್ತದೆ ಎಂದರು.


ಇದನ್ನೂ ಓದಿ: COMEDK UGET Result 2024 : ಕಾಮೆಡ್‌-ಕೆ ಫಲಿತಾಂಶ ಪ್ರಕಟ.. ರಿಸಲ್ಟ್ ಚೆಕ್‌ ಮಾಡುವ ವಿಧಾನ, ಕೌನ್


ವಿಧಾನ ಪರಿಷತ್ ಟಿಕೆಟ್ ವಿಚಾರವಾಗಿ ಮಾತನಾಡಿ, ಪಕ್ಷಕ್ಕೆ ದುಡಿದ ಅನೇಕ ಮುಖಂಡರು, ಕಾರ್ಯಕರ್ತರು ನನ್ನನ್ನು ಭೇಟಿಯಾಗಿ ಮನವರಿಕೆ ಮಾಡಿದ್ದಾರೆ. ನನಗಿರುವ ಅನುಭವ ಮತ್ತು ನನ್ನ ಅಭಿಪ್ರಾಯವನ್ನು ಪಕ್ಷದ ಅಧ್ಯಕ್ಷರಿಗೆ ಮತ್ತು ಮುಖ್ಯಮಂತ್ರಿಯವರಿಗೆ ತಿಳಿಸುತ್ತೇನೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ