ಎಲೆಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು 10 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ

ಸರ್ಕಾರ ವಿಶ್ವವಿದ್ಯಾಲಯದ ತಂಡವನ್ನು ಕಳಿಸಿ ಅಧ್ಯಯನ ಕೈಗೊಂಡಿದೆ. ಕೇಂದ್ರ ಸರ್ಕಾರದ ತಜ್ಞರು ಕೂಡ  ಚಿಕ್ಕಮಗಳೂರಿಗೆ ಬಂದು ಅಧ್ಯಯನ ಮಾಡಿದ್ದಾರೆ. ನಿರಂತರವಾಗಿ ಮಳೆ ಇರುವುದರಿಂದ ಹಾಗೂ ಗಾಳಿಯಿಂದ ಒಂದಕ್ಕೊಂದು ಹರಡುತ್ತಿದೆ.

Written by - Prashobh Devanahalli | Edited by - Bhavishya Shetty | Last Updated : Nov 27, 2022, 01:23 PM IST
    • ಅಡಕೆ ಬೆಳೆಗೆ ತಗಲಿರುವ ಎಲೆಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ
    • 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
    • ಈ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಎಲೆಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು 10 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ title=
Chikmagalur

ಚಿಕ್ಕಮಗಳೂರು: ಅಡಕೆ ಬೆಳೆಗೆ ತಗಲಿರುವ ಎಲೆಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ನಾಲ್ಕೂ ಜಿಲ್ಲೆಗಳಿಗೆ ಈ ಮೊತ್ತವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: ಗಡಿ ವಿವಾದ: ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ!

ಅವರು ಇಂದು ಹರಿಹರಪುರ ಹೆಲಿಪ್ಯಾಡ್‍ ನಲ್ಲಿ  ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸರ್ಕಾರ ವಿಶ್ವವಿದ್ಯಾಲಯದ ತಂಡವನ್ನು ಕಳಿಸಿ ಅಧ್ಯಯನ ಕೈಗೊಂಡಿದೆ. ಕೇಂದ್ರ ಸರ್ಕಾರದ ತಜ್ಞರು ಕೂಡ  ಚಿಕ್ಕಮಗಳೂರಿಗೆ ಬಂದು ಅಧ್ಯಯನ ಮಾಡಿದ್ದಾರೆ. ನಿರಂತರವಾಗಿ ಮಳೆ ಇರುವುದರಿಂದ ಹಾಗೂ ಗಾಳಿಯಿಂದ ಒಂದಕ್ಕೊಂದು ಹರಡುತ್ತಿದೆ. ಅದಕ್ಕಾಗಿ ಫಂಗಸ್ ನಿವಾರಣೆಗೆ ಔಷಧಿ ಸಿಂಪಡನೆ ಮಾಡಲಾಗುವುದು. ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ವಿಜ್ಞಾನಿಗಳು ಶಿಫಾರಸು ಮಾಡುವ ಕ್ರಮಗಳನ್ನು ಕೂಡಲೇ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: Bengaluru's potholes: ಹಳೆ ಮುದುಕಿಗೆ ಶೃಂಗಾರ ಅಂದಂಗಾಯ್ತು ಬೆಂಗಳೂರಿನ ರಸ್ತೆಗಳ ಅವಸ್ಥೆ!

ಶಾಸಕ ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಈಗಾಗಲೇ ಮಾತನಾಡಿ ಎಲ್ಲಾ ರೀತಿಯ ರಕ್ಷಣೆ ನೀಡಲು ಹಾಗೂ ತನಿಖೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News