ವಿಜಯಪುರ: ಲೋಕಸಭಾ ಚುನಾವಣೆಯ ಹಿನ್ನೆಲೆ ರಾಜ್ಯದಾದ್ಯಂತ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ವಿಜಯಪುರ ನಗರದಲ್ಲಿ ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. 


COMMERCIAL BREAK
SCROLL TO CONTINUE READING

ವಿಜಯಪುರ ನಗರದಲ್ಲಿ ಟೊಯೋಟಾ ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2 ಕೋಟಿ 93 ಲಕ್ಷ 50 ಸಾವಿರ ರೂ. ಹಣವನ್ನು ಪೊಲೀಸರು ಮತ್ತು ಚುನಾವಣಾಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಇದು ರಾಜ್ಯದಲ್ಲಿಯೇ ಅತಿದೊಡ್ಡ ಚುನಾವಣಾ ಬೇಟೆಯಾಗಿದೆ.  


ಇದನ್ನೂ ಓದಿ: CAA ಅಧಿಸೂಚನೆ ಮೇಲೆ ನಿಷೇಧ ವಿಧಿಸಲು ಸುಪ್ರೀಂ ನಕಾರ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ


ವಿಜಯಪುರದ ಜಿಲ್ಲಾ CEN ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣವನ್ನು ಜಪ್ತಿ ಮಾಡಲಾಗಿದೆ. ಸಿಂದಗಿ ಬೈಪಾಸ್ ಬಳಿಯ ಚೆಕ್‌ಪೋಸ್ಟ್ ಬಳಿ ತಪಾಸಣೆ ವೇಳೆ ದೊಡ್ಡಮೊತ್ತದ ಹಣ ಪತ್ತೆಯಾಗಿದೆ.  


ಹೈದ್ರಾಬಾದ್‌ನಿಂದ ಹುಬ್ಬಳ್ಳಿಗೆ ಟೋಯೊಟಾ ಕಾರಿನಲ್ಲಿ 2 ಕೋಟಿ 93 ಲಕ್ಷ 50 ಸಾವಿರ ರೂ. ಹಣವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣ ಸಂಬಂಧ ಕಾರಿನಲ್ಲಿದ್ದ ಬಾಲಾಜಿ ನಿಕ್ಕಂ ಮತ್ತು ಸಚಿನ್‌ ಮೋಯಿತೆ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 


ಇದನ್ನೂ ಓದಿ: Lok Sabha Election 2024: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ


ಟೋಯೋಟಾ ಕಾರು, ನಗದು ಹಣ ಹಾಗೂ ಎರಡು ಮೊಬೈಲ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಸಂಬಂಧ  ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ