ರಸ್ತೆಗಳ ಅಭಿವೃದ್ಧಿಹೆಸರಿನಲ್ಲಿ 2000 ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಸಿಬಿಗೆ ಮತ್ತೆ ದೂರು ನೀಡಿದೆ. 


COMMERCIAL BREAK
SCROLL TO CONTINUE READING

ಇಂದು ಸುದ್ದಿಗೋಷ್ಠಿ ನಡೆಸಿದ ನಗರದ ಬಿಜೆಪಿ ವಕ್ತಾರ ಎನ್.ಆರ್. ರಮೇಶ್ 2,600 ಕೋಟಿ ರೂಪಾಯಿ ಅವ್ಯವಹಾರದಲ್ಲಿ ಸಿಎಂ ಮತ್ತು ಜಾರ್ಜ್ ಬಿಬಿಎಂಪಿ ಕಾಮಗಾರಿಯಲ್ಲಿ 600 ಕೋಟಿ ರೂ.ಗಳಷ್ಟು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಗಂಭೀರವಾದ ಆರೋಪ ಮಾಡಿದ್ದಾರೆ. ಅಲ್ಲದೆ ಈ ಕುರಿತಂತೆ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಪುಟಗಳ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.


ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಕೆ.ಜೆ.ಜಾರ್ಜ್ ರಸ್ತೆ ಅಭಿವೃದ್ಧಿ ಹೆಸರಿನಲ್ಲಿ 400 ಕೋಟಿ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ 200 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಎನ್.ಆರ್. ರಮೇಶ್ ಆರೋಪ ಹೊರೆಸಿದ್ದಾರೆ.


ಇಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ರಸ್ತೆಗಳ ಅಭಿವೃದ್ಧಿಗಾಗಿ ಸರ್ಕಾರದ ಅನುದಾನದಲ್ಲಿ ಬಿಡುಗಡೆ ಮಾಡಲಾಗಿರುವ 4,878 ಕೋಟಿ ರೂ. ಹಣದಲ್ಲಿ ಸಿಎಂ ಹಾಗೂ ಸಚಿವ ಜಾರ್ಜ್ ಸುಮಾರು 400 ಕೋಟಿಗೂ ಹೆಚ್ಚು ಕಮಿಷನ್ ಪಡೆದಿದ್ದಾರೆ ಎಂದು ರಮೇಶ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.