ತೀರ್ಥಹಳ್ಳಿಯ ಎರಡು ಹೊಸ ಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂಪಾಯಿ ಮಂಜೂರು

ರಾಜ್ಯ ಆರ್ಥಿಕ ಇಲಾಖೆಯು ತೀರ್ಥಹಳ್ಳಿ ತಾಲೂಕಿನ ತೂದೂರು-ಮುಂಡುವಳ್ಳಿ ಗ್ರಾಮಗಳ ನಡುವೆ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ 25.65 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಹಾಗೂ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಾರಣಗಿರಿ - ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರಿನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 24.36 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಒಪ್ಪಿಗೆ ದೊರೆತಿದ್ದು, ಶೀಘ್ರವಾಗಿ ಯೋಜನೆ ಅನುಷ್ಠಾನಕ್ಕೆ ಟೆಂಡರ್ ಕರೆಯಲಾಗುತ್ತದೆ.

Written by - Prashobh Devanahalli | Edited by - Bhavishya Shetty | Last Updated : Nov 24, 2022, 04:04 PM IST
    • ಎರಡು ಸೇತುವೆಗಳ ಕಾಮಗಾರಿಗೆ ಹಸಿರು ನಿಶಾನೆ ನೀಡಿದ ರಾಜ್ಯ ಆರ್ಥಿಕ ಇಲಾಖೆ
    • ಸುಮಾರು 50 ಕೋಟಿ ರೂಪಾಯಿಗಳ ವೆಚ್ಚದ ಎರಡು ಸೇತುವೆಗಳ ಕಾಮಗಾರಿ
    • ಈ ಎರಡು ಯೋಜನೆಗಳ ಮಂಜೂರಾತಿಗೆ ಬೇಡಿಕೆ ಇಟ್ಟಿದ್ದ ಆರಗ ಜ್ಞಾನೇಂದ್ರ
ತೀರ್ಥಹಳ್ಳಿಯ ಎರಡು ಹೊಸ ಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂಪಾಯಿ ಮಂಜೂರು title=
Tirthahalli

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆ, ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ತೀರ್ಥಹಳ್ಳಿ ತಾಲೂಕಿನಲ್ಲಿ  ಸುಮಾರು 50 ಕೋಟಿ ರೂಪಾಯಿಗಳ ವೆಚ್ಚದ ಎರಡು ಸೇತುವೆಗಳ ಕಾಮಗಾರಿಗೆ ರಾಜ್ಯ ಆರ್ಥಿಕ ಇಲಾಖೆ, ಹಸಿರು ನಿಶಾನೆ ನೀಡಿದೆ.

ಇದನ್ನೂ ಓದಿ: ಅನುಮಾನಾಸ್ಪದ ರೀತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಶವ ಪತ್ತೆ

ರಾಜ್ಯ ಆರ್ಥಿಕ ಇಲಾಖೆಯು ತೀರ್ಥಹಳ್ಳಿ ತಾಲೂಕಿನ ತೂದೂರು-ಮುಂಡುವಳ್ಳಿ ಗ್ರಾಮಗಳ ನಡುವೆ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ 25.65 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಹಾಗೂ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಾರಣಗಿರಿ - ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರಿನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 24.36 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಒಪ್ಪಿಗೆ ದೊರೆತಿದ್ದು, ಶೀಘ್ರವಾಗಿ ಯೋಜನೆ ಅನುಷ್ಠಾನಕ್ಕೆ ಟೆಂಡರ್ ಕರೆಯಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್ ನಿಂದಲೇ ಭಯೋತ್ಪಾದನೆ, ಗಲಭೆ- ಬೇಕಾದ್ರೆ ಸಾಬೀತು ಮಾಡ್ತೀನಿ: ಮುತಾಲಿಕ್ ಗುಡುಗು

ಕ್ಷೇತ್ರದ ಶಾಸಕ ಹಾಗೂ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು ಈ ಎರಡು ಯೋಜನೆಗಳ ಮಂಜೂರಾತಿಗೆ ಬೇಡಿಕೆ ಮಂಡಿಸಿ ಪ್ರಸ್ತಾವನೆ ಸಲ್ಲಿಸಿದ್ದರು. ತೂದೂರು- ಮುಂಡುವಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಯೋಜನೆ ಕಾರ್ಯಗತಗೊಳಿಸಬೇಕೆಂದು ದಶಕಗಳಿಂದ ಬೇಡಿಕೆ ಇದ್ದರೂ ಇದುವರೆಗೆ ಮಾನ್ಯತೆ ದೊರೆತಿರಲಿಲ್ಲ. ಈ ಎರಡೂ ಕಾಮಗಾರಿಗಳನ್ನು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ವತಿಯಿಂದ ಕಾರ್ಯಗತಗೊಳಿಸಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News