ಅಲ್ಪಸಂಖ್ಯಾತರ ಅಭಿವೃದ್ಧಿಗೆ 500ಕೋಟಿ ರೂ. ಹೆಚ್ಚುವರಿ ಅನುದಾನ: ಸಿಎಂ

ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನದಲ್ಲಿ ಕಡಿತ ಮಾಡಲಾಗಿದೆ ಎಂಬ ಆರೋಪಗಳು ನಿರಾಧಾರ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

Last Updated : Dec 18, 2018, 01:57 PM IST
ಅಲ್ಪಸಂಖ್ಯಾತರ ಅಭಿವೃದ್ಧಿಗೆ 500ಕೋಟಿ ರೂ. ಹೆಚ್ಚುವರಿ ಅನುದಾನ: ಸಿಎಂ title=

ಬೆಳಗಾವಿ: ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಈ ಬಾರಿಯ ಬಜೆಟ್‍ನಲ್ಲಿ ಹೆಚ್ಚುವರಿಯಾಗಿ 500ಕೋಟಿ ರೂ. ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಮಂಗಳವಾರ ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನದಲ್ಲಿ ಕಡಿತ ಮಾಡಲಾಗಿದೆ ಎಂಬ ಆರೋಪಗಳು ನಿರಾಧಾರ. 

ಹಿಂದಿನ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ಮೈತ್ರಿ ಸರ್ಕಾರದಲ್ಲಿ ಮುಂದುವರಿಸಲಾಗಿದೆ. ಈ ಬಾರಿಯ ಬಜೆಟ್‍ನಲ್ಲಿ ಕಳೆದ ಸಾಲಿನ ಬಜೆಟ್‍ಗಿಂತ 500ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಮುಸ್ಲಿಂ, ಕ್ರಿಶ್ಚಿಯನ್, ಜೈನರು ಸೇರಿದಂತೆ ಎಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲಾಗುತ್ತಿದೆ. ಅಲ್ಪಸಂಖ್ಯಾತರ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗಾಗಿ ಹಲವು ವಿನೂತನ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಅಲ್ಪಸಂಖ್ಯಾತರು ಎಲ್ಲಾ ಸಮಸ್ಯೆಗಳಿಂದ ಹೊರಬಂದು ನೆಮ್ಮದಿಯಿಂದ ಬದುಕಬೇಕೆಂಬುವುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಜಾರಿಗೊಳಿಸಲಾಗುತ್ತಿರುವ ಯೋಜನೆಗಳ ಮಾಹಿತಿ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಡುಗಡೆ ಮಾಡಿದರು.

Trending News