ಬೆಳಗಾವಿ: ಪ್ರಸಿದ್ಧ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಭಕ್ತರು ಹಾಕಿದ ಕಾಣಿಕೆಯಿಂದ 70 ಲಕ್ಷ ರೂ. ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾದ ನಗದು ಹಣ ಮತ್ತು ಚಿನ್ನಾಭರಣವನ್ನು ಎಣಿಕೆ ಮಾಡಲಾಗಿದೆ.
ಇದನ್ನೂ ಓದಿ: ಶಂಕಿತ ಉಗ್ರರ ಬಂಧನದಿಂದ ದೊಡ್ಡ ಅನಾಹುತ ತಪ್ಪಿದೆ : ಎಡಿಜಿಪಿ ಅಲೋಕ್ ಕುಮಾರ್
ಯಲ್ಲಮ್ಮ ದೇವಿಯ ಹುಂಡಿಗೆ ಭಕ್ತರು ಹಣ, ನಗದು ಮತ್ತು ಬೆಳ್ಳಿ ಆಭರಣದವನ್ನು ಸಮರ್ಪಿಸಿದ್ದಾರೆ. ಶುಕ್ರವಾರ ಸಂಜೆ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. 5 ದಿನಗಳಿಂದ ನಡೆದಿದ್ದ ಎಣಿಕೆ ಕಾರ್ಯದಲ್ಲಿ ಒಟ್ಟು 65.70 ಲಕ್ಷ ರೂ. ನಗದು, 4.13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 1.14 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳು ಸಂಗ್ರಹವಾಗಿದೆ.
ಯಲ್ಲಮ್ಮ ದೇವಿಯ ಹುಂಡಿಯಲ್ಲಿ ಒಟ್ಟು 70 ಲಕ್ಷ ರೂ. ಸಂಗ್ರಹವಾಗಿದೆ. 5 ದಿನಗಳ ಎಣಿಕೆ ಕಾರ್ಯದಲ್ಲಿ ವಿದೇಶ ಕರೆನ್ಸಿ, ಚಿತ್ರವಿಚಿತ್ರ ಭಕ್ತರ ಪತ್ರಗಳು ಪತ್ತೆಯಾಗಿವೆ ಎಂದು ದೇವಸ್ಥಾನದ ಅಧೀಕ್ಷಕ ಅರವಿಂದ್ ಯಾಳಗಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Be Careful: ಪರಿಚಯಸ್ಥರು & ಬ್ರೋಕರ್‌ಗಳಿಗೆ ಪ್ರಾಪರ್ಟಿ ಪತ್ರ ಕೊಡುವವರೇ ಎಚ್ಚರ ಎಚ್ಚರ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.