ಕೆಎಂಡಿಸಿ ಯಿಂದ 7616 ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ 72.78 ಕೋಟಿ ರೂ. ಸಾಲ - ಸಚಿವ ಜಮೀರ್ ಅಹಮದ್
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಶಿಕ್ಷಣದ ವ್ಯಾಸಂಗಕ್ಕಾಗಿ 72.78 ಕೋಟಿ ರೂ.ಶಿಕ್ಷಣ ಸಾಲ ನೀಡಲಾಗಿದೆ.
ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಶಿಕ್ಷಣದ ವ್ಯಾಸಂಗಕ್ಕಾಗಿ 72.78 ಕೋಟಿ ರೂ.ಶಿಕ್ಷಣ ಸಾಲ ನೀಡಲಾಗಿದೆ.
ಕೆಎಂಡಿಸಿ ಕಚೇರಿಯಲ್ಲಿ ಮಂಗಳವಾರ ಪ್ರಗತಿ ಪರಿಶೀಲನೆ ನಡೆಸಿ ಸುದ್ಧಿಗಾರರ ಜತೆ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ವೈದ್ಯಕೀಯ, ದಂತ ವೈದ್ಯಕೀಯ,ಆಯುಷ್, ಫಾರ್ಮಸಿ ಎಂಜಿನಿಯರಿಂಗ್ ಕೋರ್ಸ್ ವ್ಯಾಸಂಗ ಮಾಡಲು ಬಯಸಿದ ಬಡ ಕುಟುಂಬಗಳ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಗರಿಷ್ಠ ಐದು ಲಕ್ಷ ರೂ. ವರೆಗೆ ಸಾಲದ ಸೌಲಭ್ಯ ಒದಗಿಸಲಾಗಿದೆ. ಇದರ ಜತೆಗೆ ವಿದೇಶದಲ್ಲಿ ವ್ಯಾಸಂಗ ಮಾಡಲು 88 ವಿದ್ಯಾರ್ಥಿಗಳಿಗೆ ಗರಿಷ್ಠ 10 ಲಕ್ಷ ರೂ. ವರೆಗೆ 7.5 ಕೋಟಿ ರೂ. ಸಾಲ ನೀಡಲಾಗಿದೆ ಎಂದು ವಿವರಿಸಿದರು.
ಇದನ್ನೂ ಓದಿ-ಯುವ ವಿಚ್ಛೇದನ ವಿಚಾರದ ಮಧ್ಯೆ ಬಂದ ʻಸಪ್ತಮಿ ಗೌಡʼ ಹೆಸರು.. ಯುವರಾಜ್ ಕುಮಾರ್ ಪರ ವಕೀಲರು ಹೇಳಿದ್ದೇನು?
ಅಲ್ಪಸಂಖ್ಯಾತರ ಸಮುದಾಯದ ಮಕ್ಕಳು ವೃತ್ತಿಪರ ಶಿಕ್ಷಣ ಪಡೆಯಲು ಇದರಿಂದ ಸಹಕಾರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.ಇದೇ ಮೊದಲ ಬಾರಿಗೆ ಸಣ್ಣ ವ್ಯಾಪಾರ ಮಾಡುವ ಮಹಿಳೆಯರಿಗೆ ವಿಶೇಷ ಯೋಜನೆಯಡಿಯಲ್ಲಿ 961 ಮಂದಿಗೆ 4.8 ಕೋಟಿ ರೂ. ಸಾಲ ನೀಡಲಾಗಿದ್ದು, ಇದರಲ್ಲಿ ಶೇ. 50ರಷ್ಟು ಸಬ್ಸಿಡಿ, ಉಳಿದ ಶೇ. 50 ರಷ್ಟು ಸಾಲ. ವೃತ್ತಿ ಪ್ರೋತ್ಸಾಹ ಯೋಜನೆಯಡಿ 973 ಮಂದಿಗೆ 9.73 ಕೋಟಿ ರೂ., ಶ್ರಮ ಶಕ್ತಿ ಯೋಜನೆ ಯಡಿ 1000 ಮಂದಿಗೆ 5 ಕೋಟಿ ರೂ. ಸಾಲ ಒದಗಿಸಲಾಗಿದೆ ಎಂದು ವಿವರಿಸಿದರು.
ಪ್ರಸಕ್ತ ವರ್ಷ 666 ಕಾರು, 500 ಆಟೋ ಫಲಾನುಭವಿಗಳಿಗೆ ನೀಡಲಾಗುವುದು. 23.75 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.ಈ ವರ್ಷ 200.60 ಕೋಟಿ ರೂ. ಸಾಲ ವಸೂಲಾತಿ ಮಾಡಿದ್ದು, ಕಳೆದ ವರ್ಷಕ್ಕಿಂತ 50 ಲಕ್ಷ ಹೆಚ್ಚು ವಸೂಲಾತಿ ಮಾಡಲಾಗಿದೆ ಎಂದು ತಿಳಿಸಿದರು.ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊರೆದಿರುವ ಬೋರ್ ವೆಲ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಹೆಚ್ಚು ಗಮನ ಹರಿಸಿ, ವಿದ್ಯುತ್ ಸಂಪರ್ಕ ಕಲ್ಪಿಸದ ಬಗ್ಗೆ ಸಾಕಷ್ಟು ದೂರಗಳು ಇವೆ. ಅದನ್ನು ಸರಿ ಪಡಿಸಿಕೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಲ ವಸೂಲಾತಿ ಪ್ರಮಾಣ ಹೆಚ್ಚಿಸಿ. ಇದರಿಂದ ಪ್ರತಿವರ್ಷ ಹೆಚ್ಚು ಹೆಚ್ಚು ವಿದ್ಯಾರ್ಥಿಗಳಿಗೆ ಸಾಲ ನೀಡಲು ಸಹಕಾರಿಯಾಗುತ್ತದೆ ಎಂದು ನಿರ್ದೇಶನ ನೀಡಿದರು.ಈ ವರ್ಷದ ಬಜೆಟ್ ನಲ್ಲಿ ಘೋಷಿಸಿರುವ ನಾಲ್ಕು ಹೊಸ ಯೋಜನೆ ಪರಿಣಾಮಕಾರಿಯಾಗಿ ಜಾರಿ ಗೊಳಿಸಲು ಈಗಲೇ ಕ್ರಿಯಾ ಯೋಜನೆ ಸಿದ್ದಪಡಿಸಿ ಎಂದು ನಿರ್ದೇಶನ ನೀಡಿದರು.ಕೆಎಂಡಿಸಿ ಅಧ್ಯಕ್ಷ ಬಿಕೆ ಅಲ್ತಾಫ್ ಖಾನ್, ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ನಜೀರ್ ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ