‘ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು’

ಕಾಂಗ್ರೆಸ್ ಪಕ್ಷದ ತುಷ್ಟೀಕರಣ ನೀತಿಯಿಂದ ಭಾರತದ ರಾಷ್ಟ್ರಧ್ವಜ ಇಬ್ಭಾಗವಾಯಿತು. ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ.

Written by - Zee Kannada News Desk | Last Updated : Mar 20, 2022, 06:57 PM IST
  • ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು
  • ಮೂರು ಬಣ್ಣಗಳ ರಾಷ್ಟ್ರಧ್ವಜವನ್ನು ನಿರ್ಮಾಣ ಮಾಡಿದವರು ಯಾರು?
  • ಕಾಂಗ್ರೆಸ್ ತುಷ್ಟೀಕರಣ ನೀತಿಯಿಂದ ಭಾರತದ ರಾಷ್ಟ್ರಧ್ವಜ ಇಬ್ಭಾಗವಾಯಿತು
‘ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು’ title=
ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ

ಮಂಗಳೂರು: ಮುಂದೊಂದು ದಿನ ಕೇಸರಿ ಧ್ವಜ(Saffron Flag)ವೇ ನಮ್ಮ ರಾಷ್ಟ್ರಧ್ವಜವಾದೀತು ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕುತ್ತಾರಿನಲ್ಲಿ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಸಮಾರೋಪ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.   

ಕಾಂಗ್ರೆಸ್ ಪಕ್ಷದ ತುಷ್ಟೀಕರಣ ನೀತಿಯಿಂದ ಭಾರತದ ರಾಷ್ಟ್ರಧ್ವಜ(National Flag) ಇಬ್ಭಾಗವಾಯಿತು. ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡ್ತೇನೆ. ಈ ಮೂರು ಬಣ್ಣಗಳ ರಾಷ್ಟ್ರಧ್ವಜವನ್ನು ನಿರ್ಮಾಣ ಮಾಡಿದವರು ಯಾರು? ಅದಕ್ಕಿಂತಲೂ ಮೊದಲು ಯಾವ ಧ್ವಜವಿತ್ತು? ಮುಂದೊಂದು ದಿನ ರಾಜ್ಯಸಭೆ, ಪಾರ್ಲಿಮೆಂಟ್ ನಲ್ಲಿ ಮೂರನೆಯವರು ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು. ರಾಷ್ಟ್ರಧ್ವಜ ಬದಲು ಮಾಡಬಾರದಂತೇನು ಇಲ್ಲವೆಂದು ಹೇಳಿದ್ದಾರೆ.

ಇದನ್ನೂ ಓದಿ: Hijab Verdict : ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬೆದರಿಕೆ!

ಇದೇ ರೀತಿ ಮುಂದುವರಿದಲ್ಲಿ ಹಿಂದೂ ಸಮಾಜ ಒಟ್ಟಾಗುತ್ತದೆ. ಇಂದು ‘ದಿ ಕಾಶ್ಮೀರ್ ಫೈಲ್ಸ್'(The Kashmir Files) ಸಿನಿಮಾದಲ್ಲಿ ನೀವು ನೋಡೋದು ಒಂದು ಸಣ್ಣ ತುಂಡಷ್ಟೇ. ದೇಶದಲ್ಲಿ ಧರ್ಮದ ಹತ್ಯೆಯಾದ ಸಂದರ್ಭದಲ್ಲೂ ಅದನ್ನು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಿತ್ತು. ಇಂದು ಕಿತಾಬ್ ಬದಲಿಗೆ ಹಿಜಾಬ್ ಬಂದಿದೆ. ಎಲ್ಲಾ ವ್ಯವಸ್ಥೆಗಳನ್ನೂ ನೀಡಿದರೂ ಪ್ರತ್ಯೇಕತಾವಾದಿ ಮನೋಭಾವವಿದೆ. ಇದು ದೇಶವನ್ನು ತುಂಡು ಮಾಡುವ ಪ್ರಯತ್ನ’ ಅಂತಾ ಕಿಡಿಕಾರಿದರು. 

ಇದನ್ನೂ ಓದಿ: ಪಠ್ಯದಲ್ಲಿ ಭಗವದ್ಗೀತೆ ವಿಚಾರ: ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಬಿಜೆಪಿ

ಮುಂದೊಂದು ದಿನ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಬದಲು ಕೇಸರಿ ಧ್ವಜ(Bhagwa Dhwaj) ಹಾರಿಸುವ ದಿನ ಬರುತ್ತದೆ ಎಂದು ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News