ಕೊಪ್ಪಳ : ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲೂಕಿನ ಮುನಿರಾಬಾದಿನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಸಾಮಾನ್ಯ ಅಭ್ಯರ್ಥಿ-17(ಮಹಿಳೆ-07), ಪರಿಶಿಷ್ಠ ಜಾತಿ-03 ಗಳಂತೆ ಒಟ್ಟು 20 ಅಭ್ಯರ್ಥಿಗಳ ಗುರಿ ನಿಗದಿಪಡಿಸಲಾಗಿದೆ. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಕನಿಷ್ಠ 18 ವರ್ಷ, ಗರಿಷ್ಠ 33 ವರ್ಷ ಇತರರಿಗೆ ಕನಿಷ್ಠ  18 ವರ್ಷ, ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕನ್ನಡ ವಿಷಯದೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.ಚೆನ್ನಾಗಿ ಕನ್ನಡ ಓದುವುದು, ಬರೆಯುವುದು ಮತ್ತು ಮಾತನಾಡುವುದನ್ನು ಬಲ್ಲವರಾಗಿರಬೇಕು.


ಇದನ್ನೂ ಓದಿ: International Women's Day 2022: ಭಾರತದಲ್ಲಿ ಎಲ್ಲಾ ಮಹಿಳೆಯರು ತಿಳಿದಿರಬೇಕಾದ 5 ನಾಗರಿಕ ಹಕ್ಕುಗಳು


ಈ ತರಬೇತಿಯು ರೈತರ ಮಕ್ಕಳಿಗಾಗಿರುವುದರಿಂದ ಅಭ್ಯರ್ಥಿಯ ತಂದೆ/ತಾಯಿ ಅಥವಾ  ಪೋಷಕರು (ತಂದೆ/ತಾಯಿ ಇಲ್ಲದ ಪಕ್ಷದಲ್ಲಿ)  ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ತೋಟದ ಕೆಲಸಗಳನ್ನು ಮಾಡುವಷ್ಟು  ದೃಢಕಾಯರಾಗಿರಬೇಕು.


ಸಾಮಾನ್ಯ ಆಭ್ಯರ್ಥಿಗಳು ರೂ. 30, ಪರಿಶಿಷ್ಠ ಜಾತಿ ಮತ್ತು  ಪರಿಶಿಷ್ಠ ಪಂಗಡದ ಅಭ್ಯರ್ಥಿಗಳು ರೂ.15 ಗಳ ಶುಲ್ಕವನ್ನು ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ) ಕೊಪ್ಪಳ ರವರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆಗೆ ಲಗತ್ತಿಸಬೇಕು. ಮಾರ್ಚ್ 15 ರಿಂದ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಅರ್ಜಿಗಳನ್ನು ಉಪನಿರ್ದೇಶಕರು(ಜಿ.ಪಂ) ಕೊಪ್ಪಳ (Koppal) ಅಥವಾ ಸಹಾಯಕ ತೋಟಗಾರಿಕೆ ನಿರ್ದೇಕರು (ರಾವ) ಕೊಪ್ಪಳ ರವರ ಕಛೇರಿಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ಏಪ್ರಿಲ್ 16 ರ ಸಂಜೆ 05 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬೇಕು.ಅರ್ಜಿಗಳನ್ನು ಇಲಾಖಾ ವೆಬ್‌ಸೈಟ್: www.horticulture.kar.nic.in ನಲ್ಲಿಯೂ ಡೌನ್‌ಲೋಡ್ ಮಾಡಿಕೊಳ್ಳಬಹುದು.


ಇದನ್ನೂ ಓದಿ: ಅಂತರಾಷ್ಟ್ರೀಯ ಮಹಿಳಾ ದಿನ ಬೆಳೆದು ಬಂದ ಬಗೆ....


ಏಪ್ರಿಲ್ 18 ರಂದು ಬೆಳಿಗ್ಗೆ 11 ಗಂಟೆಗೆ ತೋಟಗಾರಿಕೆ ಉಪನಿರ್ದೇಶಕರು, (ಜಿ.ಪಂ) ಕೊಪ್ಪಳ ಕಛೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಎಲ್ಲಾ  ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.ಇದಕ್ಕಾಗಿ ಪ್ರತ್ಯೇಕ ಸಂದರ್ಶನ ಪತ್ರವನ್ನು ಕಳುಹಿಸಲಾಗುವುದಿಲ್ಲ ಎಂದು ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.