ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ. ನಾಲ್ಕು ಸಾರಿಗೆ ಸಂಸ್ಥೆಗಳ (ಆರ್‌ಟಿಸಿ) ಕಾರ್ಮಿಕರು ತಮ್ಮ ಕುಟುಂಬ ಸದಸ್ಯರೊಂದಿಗೆ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದರು.


COMMERCIAL BREAK
SCROLL TO CONTINUE READING

ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 100 ಜನರ ಗುಂಪು ಸೇರಿ ರಾಜ್ಯಾದ್ಯಂತ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಮೆರವಣಿಗೆ(Protest Rally) ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೋಗಿದ್ದಾರೆ.


ಇದನ್ನೂ ಓದಿ : BS Yediyurappa: 'ರಾಜ್ಯದಲ್ಲಿ ಅಗತ್ಯವಿದ್ದ ಏರಿಯಾಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತೆ'


ಕೋವಿಡ್ -19 ಪ್ರಕರಣಗಳು(Covid Cases) ಹೆಚ್ಚಾದ ಕಾರಣ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಿಲ್ಲ. ಕೋಲಾರ, ಚಿತ್ರದುರ್ಗ, ರಾಮನಗರ, ಹಾಸನ, ಹುಬ್ಬಳ್ಳಿ, ತುಮಕೂರು ಮತ್ತು ಇತರೆ ಜಿಲ್ಲೆಗಳಲ್ಲಿ ಕಾರ್ಮಿಕರು ಮೆರವಣಿಗೆ ನಡೆಸಿದರು. ಕೋವಿಡ್ -19 ಮಾರ್ಗಸೂಚಿಗಳನ್ನು ಅನುಸರಿಸದೆ ಕೆಲ ಕಡೆ ಗುಂಪು ಸೇರಿದ್ದಾರೆ. ಆಗ ಪೊಲೀಸರು ಅನೇಕ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.


ಇದನ್ನೂ ಓದಿ : Ramesh Jarkiholi CD Case: ರಮೇಶ್ ಜಾರಕಿಹೊಳೆ ಸಿಡಿ ಕೇಸ್ ಗೆ ಬ್ಲಾಸ್ಟಿಂಗ್ ಟ್ವಿಸ್ಟ್..!


ರಾಮನಗರದಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಆನಂದ್ ಅವರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ(HD Kumaraswamy) ಅವರನ್ನು ಭೇಟಿ ಮಾಡಿ ನಡೆಯುತ್ತಿರುವ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಸೂಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ : Lord Hanuman Birth Place: ಅಂಜನೇಯ ಸ್ವಾಮಿ ಜನ್ಮಸ್ಥಾನದ ಕುರಿತು ಮುಖಾಮುಖಿಯಾದ ಕರ್ನಾಟಕ-ಆಂಧ್ರಪ್ರದೇಶ


ಈ ಕುರಿತು ಪ್ರತಿಕ್ರಿಯೆಸಿದ ಕುಮಾರಸ್ವಾಮಿ, ನಾನು ನಿಮ್ಮೊಂದಿಗೆ ಇದ್ದೇನೆ. ಉಪಚುನಾವಣೆ(Byelection) ಪ್ರಚಾರದ ಕಾರಣ ಸಿಎಂ ಮತ್ತು ಸಾರಿಗೆ ಸಚಿವರು ಇನ್ನೂ ಮೂರು ದಿನಗಳವರೆಗೆ ಲಭ್ಯವಿರುವುದಿಲ್ಲ. ಅವರು ಪ್ರಚಾರದಿಂದ ಬಂದ ನಂತರ ನಿಮ್ಮ ವಿಷಯವನ್ನು ನಾನು ಕೈಗೆತ್ತಿಗೊಳ್ಳುತ್ತೇನೆ" ಎಂದು ಪ್ರತಿಭಟನಾಕಾರರಿಗೆ ತಿಳಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.