ಕಲಬುರ್ಗಿ: ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. 


COMMERCIAL BREAK
SCROLL TO CONTINUE READING

ಕಲಬುರಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಲಿದ್ದಾರೆ. ಇಂದು ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ‌ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಹಿನ್ನೆಲೆ ಯಡಿಯೂರಪ್ಪ ಕಲಬುರಗಿಗೆ ಆಗಮಿಸುತ್ತಿದ್ದು, ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ರತ್ನಪ್ರಭಾ ಸೇರ್ಪಡೆಯಾಗಲಿದ್ದಾರೆ.


1981ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದ ಕೆ.ರತ್ನಪ್ರಭ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನವೆಂಬರ್ 30, 2017ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿ, ಒಂದು ವರ್ಷಗಳ ಕಾಲ ರಾಜ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅಷ್ಟೇ ಅಲ್ಲದೆ, ಈ ಹಿಂದೆ ಕಲಬುರ್ಗಿಯಲ್ಲಿ ಪ್ರಾದೇಶಿಕ ಆಯುಕ್ತೆಯಾಗಿಯೂ ರತ್ನಪ್ರಭಾ ಸೇವೆ ಸಲ್ಲಿಸಿದ್ದಾರೆ.