ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಾಹಿತಿ ಎಸ್.ಎಲ್ ಭೈರಪ್ಪ ಹಾಗೂ ಶ್ರೀಮತಿ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಭೈರಪ್ಪನವರಿಗೆ ಪ್ರತಿಷ್ಟಿತ ಪದ್ಮಭೂಷಣ ಪ್ರಶಸ್ತಿ ಲಭಿಸಿದರೆ, ಸಮಾಜಸೇವೆಗಾಗಿ ಸುಧಾಮೂರ್ತಿ ಅವರಿಗೆ ಲಭಿಸಿದೆ. 


"ಕ್ರಿಮಿನಲ್ ಅಪರಾಧ ಇರುವ ರೌಡಿ ಶೀಟರ್ ಗಳನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ"


ಈ ಕುರಿತಾಗಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ಮುರ್ಮು ಅವರು "ಸಮಾಜ ಕಾರ್ಯಕ್ಕಾಗಿ ಶ್ರೀಮತಿ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರದಾನ ಮಾಡಿದರು.ಲೋಕೋಪಕಾರಿ, ಹೆಸರಾಂತ ಲೇಖಕಿ ಮತ್ತು ಸುಧಾಮೂರ್ತಿ ಫೌಂಡೇಶನ್‌ನ ಅಧ್ಯಕ್ಷೆ, ಅವರು ಆರೋಗ್ಯ, ಶಿಕ್ಷಣ, ಕಲೆ ಮತ್ತು ಸಂಸ್ಕೃತಿ, ಪ್ರಾಣಿ ಕಲ್ಯಾಣ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಅನೇಕ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ" ಎಂದು ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 


ಕೊರೊನಾ ಪ್ರಕರಣಗಳ ಹೆಚ್ಚಳ, ವಕೀಲರಿಗೆ ವರ್ಕ್ ಫ್ರಾಂ ಹೋಂ ಆಯ್ಕೆ ನೀಡಿದ ಸಿಜೆಐ


ಅದೇ ರೀತಿಯಾಗಿ ಭೈರಪ್ಪನವರನ್ನು ಉಲ್ಲೇಖಿಸಿ" ತತ್ವಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಭೈರಪ್ಪ ಅವರು ವ್ಯಾಪಕವಾಗಿ ಮೆಚ್ಚುಗೆ ಪಡೆದ ಕನ್ನಡ ಲೇಖಕರಾಗಿದ್ದು, ಅವರ ಕೃತಿಗಳನ್ನು ಹಲವು ಭಾಷೆಗಳಲ್ಲಿ ಅನುವಾದಿಸಲಾಗಿದೆ" ಎಂದು ಶ್ಲಾಘಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.