ಬೆಂಗಳೂರು: ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


COMMERCIAL BREAK
SCROLL TO CONTINUE READING

ಅವರು ಇಂದು ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.


ಇದನ್ನೂ ಓದಿ-ಮಿಚುವಾಂಗ್ ಚಂಡಮಾರುತ ಎಫೆಕ್ಟ್ ! ಸಂಪೂರ್ಣ ಮುಳುಗಿದ ಚೆನ್ನೈ ! ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ !


ಎಸ್. ನಿಜಲಿಂಗಪ್ಪನವರು ರಾಜ್ಯ ಕರ್ನಾಟಕವೆಂದು ನಾಮಕರಣವಾದ ನಂತರದ ಮೊದಲ ಮುಖ್ಯಮಂತ್ರಿ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು. ನಿಜಲಿಂಗಪ್ಪನವರು ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು. 


ಅವರ ಅವಧಿಯಲ್ಲಿ ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಾಜಿತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.


ಇದನ್ನೂ ಓದಿ-ಇನ್ನೋವಾ-ಇಟಿಯಾಸ್ ಚಾಲಕನ ಮಧ್ಯೆ ಮಾರಾಮಾರಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.