ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ರಾಜೀನಾಮೆ!
ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರು: ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ರವಾನಿಸಿರುವ ಎಸ್.ಆರ್.ವಿಶ್ವನಾಥ್(S.R.Vishwanath), ತಮ್ಮೊಂದಿಗೆ ಇದುವರೆಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹೃದಯಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ 'ಗುಡ್ ನ್ಯೂಸ್' ನೀಡಿದ ಸಿಎಂ ಬಿಎಸ್ ವೈ!
ನನಗೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನಲೆಯಲ್ಲಿ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಶ್ವನಾಥ್ ತಿಳಿಸಿದ್ದಾರೆ.
'ಬಳ್ಳಾರಿ ವಿಭಜನೆ ಆದಂತೆ ಬೆಳಗಾವಿಯೂ ವಿಭಜನೆ ಆಗಲೇಬೇಕು'
ಎಸ್. ಆರ್. ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದ್ದರಿಂದ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.