BS Yediyurappa : `ಶಿಕ್ಷಣ ಸಚಿವರು ನನ್ನೊಂದಿಗೆ ಚರ್ಚಿಸಿಯೇ SSLC ಪರೀಕ್ಷೆ ದಿನಾಂಕ ನಿಗದಿಪಡಿಸಿದ್ದಾರೆ`
ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು
ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ದಿನಾಂಕ ನಿಗದಿಪಡಿಸುವ ಕುರಿತು ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿಯೇ ತೀರ್ಮಾನ ಕೈಗೊಂಡಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ(BS Yediyurappa), ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಹೇಳಿದ್ದಾರೆ.
Heavy Rain in Karnataka : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ
ಸುರೇಶ್ ಕುಮಾರ್(S Suresh Kumar) ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ದಿನಾಂಕ ನಿಗದಿಪಡಿಸುವ ಬಗ್ಗೆ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿದ್ದಾರೆ. ಆರೋಗ್ಯ ಸಚಿವ ಕೆ ಸುಧಾಕರ್ ಸಿಎಂ ಜತೆ ಚರ್ಚಿಸದೆ ಪರೀಕ್ಷಾ ದಿನಾಂಕ ಪ್ರಕಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಇದನ್ನೂ ಓದಿ : K Sudhakar : ರಾಜ್ಯಕ್ಕೆ ಬರುವ ಮಹಾರಾಷ್ಟ್ರ-ಕೇರಳ ಪ್ರಯಾಣಿಕರಿಗೆ 'RTPCR' ರಿಪೋರ್ಟ್ ಕಡ್ಡಾಯ!
ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಇದು ಏಕಪಕ್ಷೀಯ ತೀರ್ಮಾನವಲ್ಲ. ನನ್ನೊಂದಿಗೆ ಚರ್ಚಿಸಿಯೇ ಅವರು ಪರೀಕ್ಷಾ ದಿನಾಂಕ(SSLC Exam Date)ದ ನಿರ್ಧಾರ ಪ್ರಕಟಿಸಿದ್ದಾರೆ. ಯಾವುದೇ ರೀತಿಯ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : Ration Card E-KYC : ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.