ನವದೆಹಲಿ: ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಯಾಮ್ ಪಿತ್ರೊಡಾ ಕಣಕ್ಕಿಳಿಯಲಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ. 


COMMERCIAL BREAK
SCROLL TO CONTINUE READING

ರಾಜ್ಯಸಭಾ ಚುನಾವಣೆಯ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಜೊತೆ ಚರ್ಚಿಸಲು ಇಂದು ದೆಹಲಿಗೆ ಆಗಮಿಸಿದ್ದ ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ  ಪಿತ್ರೊಡಾರವರ ಹೆಸರನ್ನು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.


ಸ್ಯಾಮ್ ಪಿತ್ರೊಡಾರವರು ರಾಜೀವ್ ಗಾಂಧಿ ಕಾಲದಲ್ಲಿ ಭಾರತದಲ್ಲಿ ಟೆಲಿಕಾಂ ಕ್ರಾಂತಿಗೆ ಹೊಸ ಮುನ್ನಡೆ ಬರೆಯಲು ಪ್ರಮುಖ ಪಾತ್ರ ವಹಿಸಿದ್ದರು. ಇಂದಿಗೂ ಕೂಡಾ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿರುವ ಅವರು,ಇತ್ತೀಚಿಗೆ ರಾಹುಲ್ ಗಾಂಧಿಯವರಿಗೂ ಕೂಡಾ ಜಾಗತಿಕ ವಿವಿಗಳಲ್ಲಿ ಭಾಷಣ ಮಾಡಲು ಅವಕಾಶ ಕಲ್ಪಿಸಿ ರಾಹುಲ್ ರ ನಾಯಕತ್ವಕ್ಕೆ ಹೊಸ ತಿರುವು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 


ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಈ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸುವ ಆಲೋಚನೆಯಲ್ಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.