ಬೆಳಗಾವಿ : ಬಹುದಿನದ ಬೇಡಿಕೆಯಾದ ಕರಗಾಂವ್ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : Belagavi News : ಜನ ಸಂಕಲ್ಪ ಯಾತ್ರೆಗೆ ಚಾಲನೆ.. ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಸಿಎಂ


ಈ ಭಾಗದ ಇನ್ನೆರಡು ಏತ ನೀರಾವರಿ ಯೋಜನೆಗಳನ್ನು ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು. ಬೆಳಗಾವಿಯಲ್ಲಿ ನೀರಾವರಿ ಯೋಜನೆ , ಕೈಗಾರಿಕೆಗಳನ್ನು ಅಭಿವೃದ್ಧಿಗೊಳಿಸಲಾಗುವುದು.‌ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ ಈ ಎರಡು ನಿರಾವರಿ ಯೊಜನೆಗಳನ್ನು ಜಾರಿಗೆ ತರಲಾಗುವುದು ಎಂದರು. 


ಮುಂಬೈ ಚೆನ್ನೈ ಕೈಗಾರಿಕಾ ಕಾರಿಡಾರ್  ಯೋಜನೆಯಿಂದ ಚಿಕ್ಕೋಡಿ ಭಾಗದಲ್ಲಿ ಔದ್ಯೋಗಿಕ ಕ್ರಾಂತಿ ಆಗಲಿದೆ. ಮಹಾರಾಷ್ಟ್ರ, ಗೋವಾ ಸೇರಿಸುವ ರಸ್ತೆಗಳ ಅಭಿವೃದ್ದಿಗೊಳಿಸಲಾಗುವುದು ಎಂದರು.


ಇದನ್ನೂ ಓದಿ : ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರಿದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ


ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ದುರ್ಯೋಧನ ಐಹೊಳೆ, ಪಿ. ರಾಜೀವ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರವಿಕುಮಾರ್, ಮಾಜಿ ಸಂಸದರಾದ ರಮೇಶ್ ಕತ್ತಿ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ ಮತ್ತಿತರರು ಹಾಜರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.