ಧಾರವಾಡ : ಈಗ ಲೋಕಾಯುಕ್ತಕ್ಕೆ ಮಾತ್ರ ಭ್ರಷ್ಟಾಚಾರದ ವಿರುದ್ಧದ ವಿಚಾರಣೆ ಮಾಡಲು ಅಧಿಕಾರ ಇದೆ. ಸೂಕ್ತ ಸಿಬ್ಬಂದಿ ಕೊಟ್ಟರೆ ಸರ್ಕಾರಕ್ಕೆ ನಾ ಸಲಾಂ ಹೇಳುವೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ಹೇಳಿದರು.


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತಕ್ಕೆ ಪುನಃ ಅಧಿಕಾರ ಬಂದ ಕುರಿತು ಪ್ರತಿಕ್ರಿಯೆ ನೀಡಿ, ಲೋಕಾಯುಕ್ತಕ್ಕೆ ಸರ್ಕಾರ ಸೂಕ್ತ ಸಿಬ್ಬಂದಿ ಕೊಡಬೇಕು, ಕೊಟ್ಟರೆ ಸರ್ಕಾರಕ್ಕೆ ನಾ ಸಲಾಂ ಹೇಳುವೆ. ಕೆಲವು ಲೋಕಾಯುಕ್ತ ಕಾಯಿದೆಗಳಿಗೆ ತಿದ್ದುಪಡಿಯಾಗಬೇಕು. ಈ ಹಿಂದೆ ಇದ್ದ ಅಧಿಕಾರಗಳನ್ನು ಪುನಃ ಕೊಡಬೇಕು. ನಾನು ಪುನಃ ಲೋಕಾಯುಕ್ತಕ್ಕೆ ಬರೋದಿಲ್ಲ. ಐದು ವರ್ಷ ನನ್ನ‌ ಕರ್ತವ್ಯವನ್ನು ನಾನು ನಿಭಾಯಿಸಿದ್ದೇನೆ. ನನಗೆ ಈಗ 83 ವರ್ಷ ವಯಸ್ಸಾಯಿತು, ಹೀಗಾಗಿ ನನಗೆ ಯಾವುದೇ ಅಧಿಕಾರ ಬೇಡ ಎಂದರು.


ಇದನ್ನೂ ಓದಿ: ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ನಿಮಗೆ ಕಾಳಜಿ ಇಲ್ಲವೇ?: ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ತಿರುಗೇಟು


ಅಲ್ಲದೆ, ಯಾವ ಹುದ್ದೆ, ಅಧಿಕಾರಕ್ಕೆ ನಾನು ಈಗ ಕಾಯೋದಿಲ್ಲ. ಲೋಕಾಯುಕ್ತ ತಿದ್ದುಪಡಿಗೆ ಸಲಹೆ ಕೇಳಿದರೆ ಕೊಡುವೆ, ಆದರೆ ಅವರು ಕೇಳೋದಿಲ್ಲ. 1983ರಲ್ಲಿ ಜನತಾ ಪಕ್ಷ ಲೋಕಾಯುಕ್ತವನ್ನು ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಬಲಿಷ್ಠವಾದ ಲೋಕಾಯುಕ್ತ ಸಂಸ್ಥೆ ಕಟ್ಟಿದ್ದರು. ಆದರೆ ಮೊದಲಿನ ಹತ್ತು ವರ್ಷ ಏನೂ ನಡೆದಿರಲಿಲ್ಲ. ಎನ್‌. ವೆಂಕಟಾಚಲಯ್ಯ ಲೋಕಾಯುಕ್ತದ ಶಕ್ತಿ ತೋರಿಸಿದ್ರು. ಆ ಬಳಿಕ ನಾನು ಅವರ ಕೆಲಸ ಮುಂದುವರೆಸಿಕೊಂಡು ಹೋಗಿದ್ದೆ ಅದರ ಪರಿಣಾಮ ಬಹಳ ಆಯ್ತು ಹೀಗಾಗಿ ಲೋಕಾಯುಕ್ತ ಅಧಿಕಾರ ಕಿತ್ತುಕೊಂಡರು ದುರ್ಬಲಗೊಳಿಸು ಪ್ರಯತ್ನ ಮಾಡಿದ್ರು ಆದ್ರೆ, ಮುಚ್ಚುವ ಧೈರ್ಯ ಸರ್ಕಾರಕ್ಕೆ ಇರಲಿಲ್ಲ ಎಂದು ಹೇಳಿದರು.


ಎಸಿಬಿ ಸೃಷ್ಟಿ ಮಾಡಿದ್ದೆ ಭ್ರಷ್ಟಾಚಾರ ವಿರುದ್ಧ ಹೋರಾಟಕ್ಕೆ ಅಂತ್ಯ‌ಕೊಡಲು. ಆದರೆ, ಈಗ ಎಸಿಬಿ ಹೋಗಿ ಪುನಃ ಲೋಕಾಯುಕ್ತ ಬಂತು. ಲೋಕಾಯುಕ್ತಕ್ಕೆ ಅಧಿಕಾರ ಕೊಟ್ಟರೆ ಸಾಲದು ಬೇಕಾದ ಸಿಬ್ಬಂದಿ ಕೊಡಬೇಕು ಸಿಬ್ಬಂದಿ ಕೊಟ್ಟರೆ ಸರ್ಕಾರಕ್ಕೆ ಸಲಾಂ ಮಾಡುವೆ ಎಂದು ಪುನಃ ಉಚ್ಛರಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.