ಬೆಂಗಳೂರು : ವಾರಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ, ಬದಲಿಗೆ ಕೆಲಸ ಮಾಡುವ ಸಮಯವನ್ನು ಹೆಚ್ಚು ಉಪಯುಕ್ತವಾಗಿ ಕಳೆದು ಉಳಿದ ಸಮಯವನ್ನು ನಿಮ್ಮ ಕುಟುಂಬದೊಂದಿಗೆ ಕಳೆಯಿರಿ ಎಂದು ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಹೇಳಿದರು. 


COMMERCIAL BREAK
SCROLL TO CONTINUE READING

ದಿ ಟ್ರೇಡಿಂಗ್ ಮೈಂಡ್ಸ್ ಆಯೋಜಿಸಿದ್ದ “ಟ್ರೇಡರ್ಸ್ ಮೀಟಪ್ ಮತ್ತು ಎಜುಕೇಷನ್ ಹೀರೋಸ್” ಕಾರ್ಯಕ್ರಮದಲ್ಲಿ ಸಂತೋಷ್‌ ಹೆಗ್ಡೆ ಅವರು ಮಾತನಾಡುವಾಗ, ಇತ್ತೀಚೆಗೆ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ದೇಶದ ಪ್ರಗತಿ ಸಾಧಿಸಲು ಎಲ್ಲರೂ ವಾರಕ್ಕೆ ಎಪ್ಪತ್ತು ಗಂಟೆಗಳು ಕೆಲಸ ಮಾಡಬೇಕು ಎಂದು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿ:ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 


ವಾರಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ, ಬದಲಿಗೆ ಕೆಲಸ ಮಾಡುವ ಸಮಯವನ್ನು ಹೆಚ್ಚು ಉಪಯುಕ್ತವಾಗಿ ಕಳೆದು ಉಳಿದ ಸಮಯವನ್ನು ನಿಮ್ಮ ಕುಟುಂಬದೊಂದಿಗೆ ಕಳೆಯಿರಿ ಎಂದರು. ಅಲ್ಲದೆ, ನಾವು ನಮ್ಮ ಮಕ್ಕಳಿಗೆ ಇಂದು ಅಣುಬಾಂಬ್ ತಯಾರಿಕೆ ಹೇಳಿಕೊಟ್ಟಿದ್ದೇವೆ. ಆದರೆ ಅದನ್ನು ಬಳಸುವುದನ್ನು ಮಾತ್ರ ಹೇಳಿಕೊಟ್ಟಿಲ್ಲ ಎಂದು ಹೆಗ್ಡೆಯವರು ವಿಷಾದ ವ್ಯಕ್ತಪಡಿಸಿದರು. 


ನ್ಯಾಯಮೂರ್ತಿ ಶ್ರೀ ಗೋಪಾಲ ಗೌಡ ಅವರು, “ಬರೀ ಆರ್ಥಿಕತೆಯ ಅಭಿವೃದ್ಧಿ ಮಾತ್ರವಲ್ಲ, ಎಲ್ಲ ರಂಗಗಳಲ್ಲೂ ನಾವು ಅಭಿವೃದ್ಧಿ ಸಾಧಿಸಬೇಕಾಗಿದೆ. ಬರೀ ಆರ್ಥಿಕತೆಯ ಪ್ರಗತಿ ಮಾತ್ರ ಪ್ರಗತಿ ಎನ್ನಿಸಿಕೊಳ್ಳುವುದಿಲ್ಲ” ಎಂದರು. 


ಇದನ್ನೂ ಓದಿ:ಮಿಸ್ಟರ್ ಯುನಿವರ್ಸ್ ಪದಕ ಗೆದ್ದ ಮಂಡ್ಯದ ಹೈದ ವಿಶ್ವಾಸ್


ದಿ ಟ್ರೇಡಿಂಗ್ ಮೈಂಡ್ಸ್ ಸಂಸ್ಥೆಯು ತನ್ನ ಮೊದಲ ವಾರ್ಷಿಕೋತ್ಸವವನ್ನು ಬೆಂಗಳೂರಿನಲ್ಲಿ ಸಂಭ್ರಮದಲ್ಲಿ ಆಚರಿಸಿತು. ದಿ ಟ್ರೇಡಿಂಗ್ ಮೈಂಡ್ಸ್ ಸಂಸ್ಥಾಪಕರಾದ ಶ್ರೀ ಪವನ್ ಜೋಷಿ, ಶ್ರೀ ಅನುಶ್ರುತ್ ಮಂಚಿ, ಡಾ.ವಿನಯ್ ಶೆಟ್ಟಿ ಅಲ್ಲದೆ ಬಿಜೆಪಿ ಮುಖಂಡರು ಹಾಗೂ ಉದ್ಯಮಿಯಾದ ಶ್ರೀ ಅನಿಲ್ ಶೆಟ್ಟಿ ಹಾಗೂ ಟ್ರೇಡಿಂಗ್ ಮೈಂಡ್ಸ್ ಸಂಸ್ಥಾಪಕರಾದ ಗಿರಿಧರ್ ಉಪಸ್ಥಿತರಿದ್ದರು. 


ಈ ವಾರ್ಷಿಕ ಸಭೆಯಲ್ಲಿ ಸಮಾಜದ ಎಲ್ಲ ವಲಯಗಳ ಟ್ರೇಡರ್ ಗಳನ್ನು ಆಕರ್ಷಿಸುತ್ತದೆ. ಈ ವಿಶಿಷ್ಟ ಕಾರ್ಯಕ್ರಮವು ಮಾರುಕಟ್ಟೆಯಲ್ಲಿ ಅವರ ಜ್ಞಾನ, ಅನುಭವಗಳ ವಿನಿಮಯ ಮತ್ತು ಟ್ರೇಡ್ ಲೈವ್ ಮಾಡಲು ಟ್ರೇಡರ್ ಗಳನ್ನು ಒಟ್ಟಿಗೆ ಸೇರಿಸುವ ವೇದಿಕೆಯಾಗಿದೆ. 1000ಕ್ಕೂ ಹೆಚ್ಚು ಮಂದಿ ಆನ್ಲೈನ್ ನಲ್ಲಿ ನೋಂದಣಿಯಾಗಿದ್ದರು. ಆಯ್ದ 300ಕ್ಕೂ ಹೆಚ್ಚು ಮಂದಿ ನೇರವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.