ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಹುದ್ದೆಗೆ ಸವಿತಾ ಕಾಂಬಳೆ, ಉಪ ಮೇಯರ್ ಸ್ಥಾನಕ್ಕೆ ಆನಂದ ಚೌಹಾನ್ ಆಯ್ಕೆಯಾಗಿದ್ದಾರೆ. ಕೂಲಿ ಮಾಡಿ ಬದುಕು ಸಾಗಿಸುತ್ತಿದ್ದ ಮಹಿಳೆಗೆ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕಟ್ಟುವ ಮೂಲಕ ಹೊಸ ಇತಿಹಾಸ ಸೃಷ್ಟಿಸುವಲ್ಲಿ ಬಿಜೆಪಿ ಸಫಲವಾಗಿದೆ.


COMMERCIAL BREAK
SCROLL TO CONTINUE READING

ಹೌದು.. ಬೆಳಗಾವಿ ಮಹಾನಗರ ಪಾಲಿಕೆ ಕಮಲ ತೆಕ್ಕೆಗೆ ಸೇರಿತ್ತು. ರಾಜ್ಯದ ಎರಡನೇ ಅತಿದೊಟ್ಟ ಮಹಾನಗರ ಪಾಲಿಕೆ ಎಂಬ ಖ್ಯಾತಿ ಹೊಂದಿರುವ ಬೆಳಗಾವಿ ಪಾಲಿಕೆಗೆ ಸಧ್ಯ ಮಹಿಳಾ ಸಾರಥಿ ಯಾಗಿರುವುದು ವಿಶೇಷ. ಜಿಲ್ಲೆಯ ರಾಯಬಾಗ ತಾಲೂಕಿನ ಶಿರಗೂರ ಗ್ರಾಮದ ಸವಿತಾ ಕಾಂಬಳೆ ಕೂಲಿ ಮಾಡಿ ಬದುಕು ಕಟ್ಟಿಕೊಂಡಿದ್ದರು. ಸಂಸಾರದ ಏರುಪೇರಿನಿಂದ ಬೆಳಗಾವಿ ಮಹಾನಗರಕ್ಕೆ ಬಂದಿದ್ದ ಸವಿತಾ ಅವರು ಇಲ್ಲಿಯೇ ಮನೆಗಳಲ್ಲಿ ಕೆಲಸ ಮಾಡುತ್ತಾ ಬದುಕು ಸಾಗಿಸುತ್ತಿದ್ದರು. 


ಇದನ್ನೂ ಓದಿ:ಸರ್ಕಾರಿ ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಬ್ರೇಕ್..!


ಈ ಮಧ್ಯೆಯೇ ಸವಿತಾ ನಗರದ ಸರ್ದಾ‌ರ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವರೆಗೆ ವಿಧ್ಯಾಭ್ಯಾಸ ಮಾಡಿದ್ದರು, ಬದುಕಿನ ಜಂಜಾಟಗಳ ಮಧ್ಯೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧೆ ಮಾಡಿದ ಸವಿತಾ ಅವರು ಪಾಲಿಕೆ ಸಧಸ್ಯೆಯಾಗಿ ಚುನಾಯಿತರಾಗಿದ್ದರು. ಸಧ್ಯ ಅವರು ಬೆಳಗಾವಿ ಮಹಾನಗರ ಪಾಲಿಕೆ ಮೇಯ‌ರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮಹಿಳಾ ಸಮಾನತೆ ಮೂಲಮಂತ್ರ ಬೆಳಗಾವಿಯಲ್ಲಿ ಯಶಸ್ವಿಯಾಗಿದೆ. 


ಸಾಧನೆ ಮಾಡುವುದಕ್ಕೆ ಬಡತನ ಅಡ್ಡಿ ಬರುವುದಿಲ್ಲ ಎನ್ನುವುದಕ್ಕೆ ಸವಿತಾ ಅವರೇ ನಿದರ್ಶನ. ಸವಿತಾ ಕಾಂಬಳೆ ಅವರು ಮೇಯರ್ ಆಗಿ ಆಯ್ಕೆಯಾಗಲು ಸ್ಥಳೀಯ ಶಾಸಕ ಅಭಯ್ ಪಾಟೀಲ್ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ ಅವರ ಶ್ರಮ ಸಾಕಷ್ಟಿದ್ದು, ಜೊತೆಗೆ ತಮಗೆ ಅವಕಾಶ ಕಲ್ಪಿಸಿದ ಬಿಜೆಪಿ ಪಕ್ಷಕ್ಕೂ  ಕೃತಜ್ಞತೆ ಸಲ್ಲಿಸಿದ್ದಾರೆ. ಸ್ಥಳೀಯರಾದ ವೀರೇಶ್ ಕಿವಡಸಣ್ಣವರ ಪ್ರಮುಖ ಪಾತ್ರವಿತ್ತು ಎಂದು ಧನ್ಯವಾದ ಅರ್ಪಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.