ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅರ್ಜಿ ಸಲ್ಲಿಸಲು ಮಾರ್ಚ್.05 ರವರೆಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫೆಬ್ರವರಿ ಮಾಹೆಯಿಂದ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳ ಹಾಗೂ ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್.20 ರವರೆಗೆ ವಿಸ್ತರಿಸಲಾಗಿದೆ.


ವೆಬ್‌ಸೈಟ್ ವಿಳಾಸ  www.ssp.postmatric.karnataka.gov.in ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ  www.bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಸಂಖ್ಯೆ: 080-35254757, ಇ-ಮೇಲ್ ವಿಳಾಸ postmetrichelpdesk@karnataka.gov.in  ಅಥವಾ ಸಹಾಯವಾಣಿ ಸಂಖ್ಯೆ: 8050770005, 8050770004 ಇ-ಮೇಲ್  bcwd.scholarship@karnataka.gov.in  ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಬಿ.ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.