ನಿಲ್ಲದ ಮಳೆಯ ನರ್ತನ: ಕೊಡಗು-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಳೆ ಹಾಗೂ ಭೂಕುಸಿತದ ಆತಂಕದಲ್ಲಿ ಕೊಡಗಿನ ಜನತೆ.

Last Updated : Aug 13, 2019, 07:49 AM IST
ನಿಲ್ಲದ ಮಳೆಯ ನರ್ತನ: ಕೊಡಗು-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ title=
File Image

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ವರುಣ ನರ್ತನ ಇಂದೂ ಕೂಡ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಕೊಡಗು-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದೂ ಸಹ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಹಾಗೂ ಭೂಕುಸಿತದ ಆತಂಕದಲ್ಲಿ ಕೊಡಗಿನ ಜನತೆ:
ಕೊಡಗಿನಲ್ಲಿ ವಾರಾಂತ್ಯದವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮಡಿಕೇರಿಯಲ್ಲಿ ಹಲವೆಡೆ ಭೂಕುಸಿತ ಮುಂದುವರೆದಿದೆ. ಇದರಿಂದಾಗಿ ಮಂಗಳವಾರ, ಬುಧವಾರ ಎರಡೂ ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೊಡಗಿನ ಜನತೆ ಮಳೆ ಹಾಗೂ ಭೂಕುಸಿತದ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

ಚಿಕ್ಕಮಗಳೂರು ಜಿಲ್ಲೆಯ  ಕೊಪ್ಪ, ಎನ್.ಆರ್.ಪುರ, ಶೃಂಗೇರಿ, ಮೂಡಿಗೆರೆ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಈ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
 

Trending News