ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ.. ಧಾರಾಕಾರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ

karnataka school holiday: ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Written by - Chetana Devarmani | Last Updated : Jun 27, 2024, 11:17 AM IST
    • ಕರ್ನಾಟಕದ ಹಲವೆಡೆ ಭಾರೀ ಮಳೆ
    • ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
    • IMD ರೆಡ್ ಅಲರ್ಟ್ ಘೋಷಣೆ
ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ.. ಧಾರಾಕಾರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ title=

Rain in Karnataka: ಜೂನ್ 27 ರಂದು ಕರಾವಳಿ ಕರ್ನಾಟಕಕ್ಕೆ IMD ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆದೇಶದ ಪ್ರಕಾರ, ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರಂದು ಮಂಗಳೂರಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸಮುದ್ರ ತೀರ ಅಥವಾ ನದಿ ತೀರಕ್ಕೆ ತೆರಳದಂತೆ  ಸೂಚಿಸಲಾಗಿದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ:ಗೃಹ ಸಚಿವ ಪರಮೇಶ್ವರ್ 

ಮುಂಗಾರು ಆಗಮನದ ನಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಭೂಕುಸಿತಕ್ಕೆ ಒಳಗಾಗುವ ಹಲವಾರು ಪ್ರದೇಶಗಳನ್ನು ಗುರುತಿಸಲಾಗಿದೆ. ಅಪಾಯಗಳನ್ನು ತಗ್ಗಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ತಗ್ಗು ಪ್ರದೇಶಗಳು, ಕೊಳಗಳು, ನದಿಗಳು ಮತ್ತು ಸಮುದ್ರ ತೀರದಂತಹ ಜಲಮೂಲಗಳ ಭೇಡಿಯನ್ನು ತಪ್ಪಿಸುವಂತೆ ನಿವಾಸಿಗಳಿಗೆ ತಿಳಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶದಲ್ಲಿ ತಿಳಿಸಿದೆ. 

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ IMD ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಗುರುವಾರ ಕರಾವಳಿ ಕರ್ನಾಟಕದಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಜೂನ್ 28 ರಿಂದ ಜೂನ್ 30 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕೊಳ್ಳೇಗಾಲದಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ಬೃಹತ್ ಜಾಥಾ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News